ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಬ್ರಿ: 92ಲಕ್ಷ ರೂ. ವೆಚ್ಚದ ಮಿನಿ ಎಂಆರ್‌ಎಫ್ ಘಟಕಕ್ಕೆ ಸಚಿವರಿಂದ ಗುದ್ದಲಿ ಪೂಜೆ

ಇತ್ತೀಚಿನ ದಿನಗಳಲ್ಲಿ ಮನುಷ್ಯ ಬಳಸಿದ ದಿನೋಪಯೋಗಿ ವಸ್ತುಗಳು ಹಾಗೂ ಪ್ಲಾಸ್ಟಿಕ್‌ ಅಭಿವೃದ್ಧಿಗೆ ದೊಡ್ಡ ಸವಾಲಾಗಿದೆ. ಪ್ಲಾಸ್ಟಿಕ್ ನಿಷೇಧವಿದ್ದರೂ ಜನ ಹೆಚ್ಚೆಚ್ಚು ಬಳಸುತ್ತಿದ್ದಾರೆ. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡದಿದ್ದರೆ ಭವಿಷ್ಯದಲ್ಲಿ ಅನಾಹುತ ನಿಶ್ಚಿತ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ 92 ಲಕ್ಷರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮಿನಿ ಎಂಆರ್ ಎಫ್ ಘಟಕಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಈ ಹಿಂದೆ ಬೆಂಗಳೂರು ಮತ್ತು ಮಂಗಳೂರಿನಂಥ ಮಹಾ ನಗರಗಳಿಗೆ ಮಾತ್ರ ಕಸ ವಿಲೇವಾರಿ ಸಮಸ್ಯೆಯಾಗಿತ್ತು. ಆದರೆ ಇಂದು ಗ್ರಾಮ ಮಟ್ಟದಲ್ಲೂ ಸಮಸ್ಯೆ ತಲೆದೋರಿದೆ. ಜನರು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ ಹಸಿ ಮತ್ತು ಒಣ ಕಸವನ್ನು ವಿಂಗಡಿಸಿ ಸಿಬ್ಬಂದಿಗೆ ನೀಡಬೇಕು ಎಂದು ತಿಳಿಸಿದರು.

ಈ ವೇಳೆ ಹೆಬ್ರಿ ನಾಗರಾಜ್ ಜೋಯಿಸ್‌, ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಹೆಬ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ ಅಧ್ಯಕ್ಷತೆ ವಹಿಸಿದ್ದರು.

Edited By :
Kshetra Samachara

Kshetra Samachara

22/08/2022 07:43 pm

Cinque Terre

5.63 K

Cinque Terre

1

ಸಂಬಂಧಿತ ಸುದ್ದಿ