ಮುಲ್ಕಿ ಸಮೀಪದ ಕಿಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕಾಡು ಬಳಿ ರಸ್ತೆ ಅವ್ಯವಸ್ಥೆಗಳ ಆಗರವಾಗಿದ್ದು ಭಾರೀ ಮಳೆಗೆ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸದೆ ಕೃತಕ ನೆರೆ ಉಂಟಾಗಿ ರಸ್ತೆ ಸಂಚಾರ ದುಸ್ತರವಾಗಿ ಪರಿಣಮಿಸಿದೆ.
ಕಿಲ್ಪಾಡಿ ಗ್ರಾ.ಪಂ.ವ್ಯಾಪ್ತಿಯ ಕೆರೆಕಾಡು ಶೀನಾ ಎಂಬುವರ ಮನೆಯಿಂದ ಭಾರತ್ ಮಾತಾ ಶಾಲೆಗೆ ಸಂಪರ್ಕಿಸುವ ಈ ರಸ್ತೆಯಲ್ಲಿ ಅರ್ಧಂಬರ್ಧ ಕಾಂಕ್ರೀಟೀಕರಣ ನಡೆದಿದೆ. ಈ ಮಣ್ಣಿನ ರಸ್ತೆಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ತುಂಬಿ ಹರಿಯುವ ನೀರಿನಿಂದ ಶಾಲಾ ಮಕ್ಕಳಿಗೆ ನಡೆದುಕೊಂಡು ಹೋಗಲು ತೀವ್ರ ತೊಂದರೆಯಾಗಿದೆ. ಈ ಪರಿಸರದಲ್ಲಿ ದಾರಿದೀಪ ವ್ಯವಸ್ಥೆಯೂ ಇಲ್ಲ. ಹಾಗಾಗಿ ಕಿಲ್ಪಾಡಿ ಪಂಚಾಯತ್ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಸ್ಥಳೀಯರಾದ ಕೃಷ್ಣ ಆಚಾರ್ಯ, ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀಕಾಂತ ಕೆರೆಕಾಡು ಮಾತನಾಡಿ ಈ ಬಗ್ಗೆ ಸ್ಥಳೀಯ ಪಂಚಾಯತ್ ಸದಸ್ಯರಿಗೆ ದೂರು ನೀಡಿದರೂ ಇದುವರೆಗೂ ಸಮರ್ಪಕವಾಗಿ ಕೆಲಸ ನಡೆದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಿಲ್ಪಾಡಿ ಗ್ರಾಪಂ ಉಪಾಧ್ಯಕ್ಷ ಗೋಪಿನಾಥ ಪಡಂಗ ಮಾತನಾಡಿ ಕೂಡಲೇ ಅವ್ಯವಸ್ಥೆಯನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
Kshetra Samachara
05/07/2022 01:23 pm