ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಇಕ್ಕೆಲ ಸೂಕ್ತ ಒಳಚರಂಡಿ ಇಲ್ಲದೆ ಕೆಸರುಮಯವಾಗಿ ಸಂಚಾರ ದುಸ್ತರವಾಗಿದೆ.
ಬಸ್ ನಿಲ್ದಾಣದ ಬಳಿ ಕಸದ ರಾಶಿ ತುಂಬಿದ್ದು, ಕೊಳಚೆ ನೀರಿನಿಂದ ರೋಗ ಭೀತಿ ಎದುರಾಗಿದೆ. ಈ ಬಗ್ಗೆ ಅನೇಕ ಬಾರಿ ಸಂಸದರಿಗೆ, ಶಾಸಕರಿಗೆ ಹಾಗೂ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ.
ಹೆದ್ದಾರಿಯಲ್ಲಿ ವಾಹನಗಳು ಅತೀ ವೇಗದಲ್ಲಿ ಸಾಗುವಾಗ ಪಾದಚಾರಿಗಳಿಗೆ ಕೆಸರಿನ ಸಿಂಚನವಾಗುತ್ತಿದ್ದು, ರಸ್ತೆ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.
ಕೂಡಲೇ ಹೆದ್ದಾರಿ ಇಲಾಖೆ ಅಧಿಕಾರಿಗಳು ಹಳೆಯಂಗಡಿ ಜಂಕ್ಷನ್ ಒಳಚರಂಡಿ ಅವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಅದ್ದಿ ಬೊಳ್ಳೂರು ಆಗ್ರಹಿಸಿದ್ದಾರೆ.
PublicNext
19/08/2022 02:55 pm