ಗ್ರಾಮೀಣ ಭಾಗದ ಜನರು ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ದೂರದ ಊರಿಗೆ ಅಲೆದಾಡುವುದನ್ನು ತಪ್ಪಿಸಲು ಕಾರ್ಕಳ ತಾಲೂಕಿನಲ್ಲಿ ಉಪ ವಿಭಾಗೀಯ ಕಚೇರಿಗಳನ್ನು ತೆರೆದು ಆ ಮೂಲಕ ಜನರಿಗೆ ಗುಣಮಟ್ಟದ ಸೇವೆ ನೀಡುವುದೇ ನಮ್ಮ ಗುರಿಯಾಗಿದೆ ಎಂದು ಇಂಧನ ಸಚಿವ ವಿ ಸುನಿಲ್ ಕುಮಾರ್ ಹೇಳಿದರು.
ಇನ್ನು ನಿಟ್ಟೆಯಲ್ಲಿ ಮೆಸ್ಕಾಂ ಉಪವಿಭಾಗಿಯ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿ, ಅಭಿವೃದ್ಧಿ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು ಎನ್ನುವ ನಿಟ್ಟಿನಲ್ಲಿ ಕಾರ್ಕಳ ತಾಲೂಕಿನಾದ್ಯಂತ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಶಾಶ್ವತ ಪರಿಹಾರಗಳನ್ನು ಕಲ್ಪಿಸಲಾಗಿದೆ. ಕಾರ್ಕಳದಲ್ಲಿ ಮುಂದಿನ 20 ವರ್ಷಗಳ ದೂರದೃಷ್ಟಿಯನ್ನಿಟ್ಟುಕೊಂಡು ಯೋಜನೆಗಳನ್ನು ರೂಪಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಮೆಸ್ಕಾಂ ನೂತನ ವಾಹನವನ್ನು ಲೋಕಾರ್ಪಣೆಗೊಳಿಸಿದರು.
Kshetra Samachara
03/09/2022 05:39 pm