ಉಡುಪಿ: ಖಾಸಗಿ ಬಸ್ ಟಿಕೆಟ್ ದರ ಇಳಿಸುವಂತೆ ವಿದ್ಯಾರ್ಥಿಗಳಿಗೆ ಬಸ್ ದರ ರಿಯಾಯಿತಿ ನೀಡುವಂತೆ ಮತ್ತು ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಸಂಕಷ್ಟದಲ್ಲಿದ್ದ ಬಸ್ ಚಾಲಕರು ಮತ್ತು ನಿರ್ವಾಹಕರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಅವರಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಅಮೀನ್ ಪಡುಕರೆ, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಮಮತಾ ಶೆಟ್ಟಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಎಸ್.ಸಿ ಘಟಕದ ಅಧ್ಯಕ್ಷರಾದ ಗಣೇಶ್ ನೆರ್ಗಿ, ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಹಮ್ಮಾದ್, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಉಪಸ್ಥಿತರಿದ್ದರು.
Kshetra Samachara
27/09/2021 07:31 pm