ಬಜಪೆ:31.50 ಲಕ್ಷ ರೂಪಾಯಿ ವೆಚ್ಚದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ಮರುಡಾಂಬರೀಕರಣಗೊಳ್ಳಲಿರುವ ಎಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಕ್ಕಾರು - ಮೇಲೆಕ್ಕಾರ್ ರಸ್ತೆ ಕಾಮಗಾರಿಗೆ ಮೂಲ್ಕಿ - ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಇಂದು ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭ ಎಕ್ಕಾರು ಕೊಡಮಣೆತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ನಿತಿನ್ ಹೆಗ್ಡೆ ಕಾವರ ಮನೆ,ಜಿ.ಪಂ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ,ಬಿಜೆಪಿಯ ದ.ಕ ಜಿಲ್ಲಾ ಉಪಾಧ್ಯಕ್ಷ ಈಶ್ವರ್ ಕಟೀಲ್,ಎಕ್ಕಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುರೇಖಾ ರೈ,ಪ್ರಕಾಶ್ ಕುಕ್ಯಾನ್,ಪಂಚಾಯತ್ ಸದಸ್ಯರುಗಳಾದ ಸತೀಶ್ ಶೆಟ್ಟಿ,ಸುದೀಪ್ ಅರ್ ಅಮೀನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
11/01/2022 10:43 am