ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಬೆಳಕು ಯೋಜನೆಗೆ ಶಾಸಕ ಸಂಜೀವ ಮಠಂದೂರು ಚಾಲನೆ

ಪುತ್ತೂರು: ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಅರ್ತಿಪದವು ಪರಿಶಿಷ್ಟ ಜಾತಿ ಕುಟುಂಬಗಳಿಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಸರಕಾರದ ಬೆಳಕು ಯೋಜನೆಯನ್ನು ಹಸ್ತಾಂತರಿಸಿದರು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೂರು ದಿನಗಳ ಯೋಜನೆಯನ್ನು ಇಟ್ಟುಕೊಂಡು ರಾಜ್ಯದ ಜನರಿಗೆ ಸಿಗಬೇಕಾದ ಸವಲತ್ತುಗಳನ್ನು ತಲುಪಿಸುವ ಕಾರ್ಯವನ್ನು ಮಾಡುತ್ತಿದ್ದು, ಈ ಯೋಜನೆಯಲ್ಲಿ ವಿದ್ಯುತ್ ವಂಚಿತ ಕುಟುಂಬಗಳಿಗೆ ಬೆಳಕು ಕಾರ್ಯಕ್ರಮದ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸುವುದೂ ಒಂದಾಗಿದೆ. ಇಂಧನ ಸಚಿವ ಸುನಿಲ್ ಕುಮಾರ್ ಅಧಿಕಾರ ಸದವೀಕರಿಸಿದ ಬಳಿಕ ಇಲಾಖೆಯಲ್ಲಿ ಹೊಸತನವನ್ನು ತಂದಿದ್ದು, ಇದು ರಾಜ್ಯದ ಬಡ ಹಾಗೂ ರೈತಾಪಿ ವರ್ಗಕ್ಕೆ ಬಹಳಷ್ಟು ಅನುಕೂಲವಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

Edited By : Nagesh Gaonkar
Kshetra Samachara

Kshetra Samachara

09/04/2022 09:09 pm

Cinque Terre

16.68 K

Cinque Terre

0

ಸಂಬಂಧಿತ ಸುದ್ದಿ