ಮಂಗಳೂರು:ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಅಂದ್ರೆ ಐಟಿಡಿಪಿಯಡಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದ ಕೊರಗ ಸಮುದಾಯದ ಜನರ ಪೂರ್ಣ ಪ್ರಮಾಣದ ವೈದ್ಯಕೀಯ ವೆಚ್ಚವನ್ನು ಪಾವತಿಸಲಾಗುತ್ತಿದೆ. ಇತ್ತೀಚೆಗೆ ಅದನ್ನು ರದ್ದುಪಡಿಸಿರುವುದನ್ನು ಆಕ್ಷೇಪಿಸಿ ಕೊರಗ ಸಮುದಾಯದವರು ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಕಾಲ್ನಡಿಗೆ ಜಾಥಾ ನಡೆಸಿದರು.
ನಗರದ ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ಜಿಲ್ಲೆಯ ವಿವಿಧ ಕಡೆಗಳಿಂದ ಆಗಮಿಸಿದ ಸಮುದಾಯದ ನೂರಾರು ಮಂದಿ ಜಮಾಯಿಸಿದರು. ಸಮುದಾಯದ ಮುಖಂಡರು, ಮಹಾತ್ಮ ಗಾಂಧಿ, ಡಾ.ಬಿ.ಆರ್. ಅಂಬೇಡ್ಕರ್, ಕೊರಗ ಸಮುದಾಯದ ಹಿರಿಯ ಮುಖಂಡ ದಿ. ಗೋಕುಲದಾಸ್, ಕುದ್ಮುಲ್ ರಂಗರಾವ್ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಜಾಥಾಕ್ಕೆ ಚಾಲನೆ ನೀಡಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕೊರಗರ ಸಂಘದ ವತಿಯಿಂದ ಆಯೋಜಿಸಲಾದ ಜಾಥಾದಲ್ಲಿ ಸಮುದಾಯದ ಆರೋಗ್ಯಕ್ಕಾಗಿನ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಭಿತ್ತಿಪತ್ರಗಳನ್ನು ಹಿಡಿದು ಮೌನವಾಗಿ ಕಾಲ್ನಡಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
Kshetra Samachara
14/06/2022 02:26 pm