ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಕ್ಷೀರಸಾಗರ ಹಾಲಿನ ಸೊಸೈಟಿ ಬಳಿ ಹೆದ್ದಾರಿ ಸರ್ವೀಸ್ ರಸ್ತೆಯ ಅರ್ಧಂಬರ್ಧ ಕಾಮಗಾರಿಯಿಂದ ಸ್ಥಳೀಯರು ಹೈರಾಣಾಗಿದ್ದು, ಗುತ್ತಿಗೆದಾರರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ʼಕ್ಷೀರಸಾಗರʼ ಬಳಿ ಕಳೆದ ಕೆಲವು ವರ್ಷಗಳಿಂದ ಹೆದ್ದಾರಿ ಸರ್ವೀಸ್ ರಸ್ತೆ ಹಾಗೂ ಚರಂಡಿ ಕಾಮಗಾರಿ ನಡೆಯುತ್ತಿದ್ದು, ಅರ್ಧಂಬರ್ಧ ಕಾಮಗಾರಿಯಿಂದಾಗಿ ಸೂಕ್ತ ರಸ್ತೆ ವ್ಯವಸ್ಥೆ ಇಲ್ಲದೆ ಸ್ಥಳೀಯ 30 ಕುಟುಂಬಗಳು ತ್ರಿಶಂಕು ಸ್ಥಿತಿಯಲ್ಲಿದೆ.
ಹೆದ್ದಾರಿ ಕಾಮಗಾರಿ ನಡೆಸುವವರು ತಾತ್ಕಾಲಿಕ ನೆಲೆಯಲ್ಲಿ ಮಣ್ಣಿನ ರಸ್ತೆ ಮಾಡಿಕೊಟ್ಟಿದ್ದು, ಸಂಚಾರ ಅಪಾಯಕಾರಿಯಾಗಿ ಪರಿಣಮಿಸಿದೆ. ಈ ಭಾಗದಲ್ಲಿ ಸರ್ವೀಸ್ ರಸ್ತೆ ಕಾಮಗಾರಿ ಅರ್ಧದಲ್ಲಿ ನಿಂತಿದ್ದು, ಕಾಮಗಾರಿಯ ರೋಲರ್ ಮತ್ತಿತರ ವಸ್ತುಗಳನ್ನು ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದಾರೆ.
ಹೆದ್ದಾರಿ ಬದಿ ನಿಂತಿರುವ ಟಿಪ್ಪರ್ ಮತ್ತು ರೋಡ್ ರೋಲರ್ ಗಳಿಂದ ಸ್ಥಳೀಯ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದ್ದು, ಕೂಡಲೇ ಸರಿಪಡಿಸುವಂತೆ ಮುಲ್ಕಿ ನಪಂ ಸದಸ್ಯ ಯೋಗೀಶ್ ಕೋಟ್ಯಾನ್ ಆಗ್ರಹಿಸಿದ್ದಾರೆ.
Kshetra Samachara
28/06/2022 01:17 pm