ಮಂಗಳೂರು: ಶಿರಾಡಿ ಘಾಟಿ ಬಂದ್ ಆಗಿರುವ ಹಾಗೂ ಸಂಪಾಜೆ ಮತ್ತು ಚಾರ್ಮಾಡಿ ಘಾಟಿಗಳಲ್ಲಿಯೂ ವಾಹನ ಸಂಚಾರ ದುಸ್ತರವಾಗಿರುವ ಹಿನ್ನಲೆಯಲ್ಲಿ ಮಂಗಳೂರು ಬೆಂಗಳೂರು ಹಾಗೂ ಬೆಂಗಳೂರು ಮಂಗಳೂರು ನಡುವೆ ಪ್ರತಿನಿತ್ಯ ಹೆಚ್ಚುವರಿ ಟ್ರೈನ್ ಓಡಿಸುವಂತೆ ಕೇಂದ್ರ ರೈಲ್ವೇ ಸಚಿವರಾದ ಅಶ್ವಿನಿ ವೈಷ್ಣವ್ ರವರನ್ನು ನವದೆಹಲಿಯಲ್ಲಿ ಭೇಟಿಯಾಗಿ ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಮನವಿ ಸಲ್ಲಿಸಿದ್ದಾರೆ.
ಇದಕ್ಕೆ ಸ್ಪಂದಿಸಿದ ಸಚಿವರು ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
Kshetra Samachara
18/07/2022 06:24 pm