ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು- ಬೆಂಗಳೂರು ಹೆದ್ದಾರಿ ಸಂಚಾರ ದುಸ್ಥರ: ಹೆಚ್ಚುವರಿ ರೈಲಿಗೆ ಹೆಚ್ಚಿದ ಡಿಮ್ಯಾಂಡ್

ಮಂಗಳೂರು: ಮಂಗಳೂರಿನಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಮೂರು ಪ್ರಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಲ್ಲಲ್ಲಿ ಕುಸಿತ ಉಂಟಾಗಿ ಸಂಚಾರ ದುಸ್ಥರವಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು- ಬೆಂಗಳೂರಿನ ನಡುವಿನ ಸಂಚಾರಕ್ಕೆ ಹೆಚ್ಚುವರಿ ರೈಲಿಗೆ ಬೇಡಿಕೆಗೆ ಹೆಚ್ಚಿನ ಡಿಮ್ಯಾಂಡ್ ಬಂದಿದೆ.

ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟಿ ಹಾಗೂ ಪರ್ಯಾಯ ರಸ್ತೆಗಳಾದ ಚಾರ್ಮಾಡಿ, ಸಂಪಾಜೆ, ಆಗುಂಬೆ ರಸ್ತೆಗಳಲ್ಲಿ ಭಾರಿ ಮಳೆಗೆ ಸಂಭವಿಸಿರುವ ಭೂಕುಸಿತದಿಂದಾಗಿ ಮಂಗಳೂರಿನಿಂದ ಬೆಂಗಳೂರಿಗೆ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತ ಹಂತಕ್ಕೆ ತಲುಪಿದೆ. ಹಾಗಾಗಿ ಮಂಗಳೂರಿನಿಂದ ಪ್ರಸ್ತುತ ಇರುವ ರೈಲುಗಳ ಜತೆ ಕೂಡಲೇ ಹೆಚ್ಚುವರಿ ರೈಲುಗಳನ್ನು ಓಡಿಸುವಂತೆ ಕರಾವಳಿ ಭಾಗದಿಂದ ಪ್ರಯಾಣಿಕರು, ವಿವಿಧ ಸಂಘಟನೆಗಳಿಂದ ಈಗಾಗಲೇ ಒತ್ತಾಯಿಸಲಾಗಿದೆ.

ಪ್ರಸ್ತುತ ಮಂಗಳೂರು-ಬೆಂಗಳೂರು-ಮಂಗಳೂರು ಮಧ್ಯೆ ಮಂಗಳೂರು-ಕಣ್ಣೂರು ರೈಲು ವಾರಕ್ಕೆ 4 ದಿನ, ಗೊಮ್ಮಟೇಶ್ವರ ಎಕ್ಸ್‌ಪ್ರೆಸ್‌ ವಾರಕ್ಕೆ 3 ದಿನ, ವಯಾ ಮೈಸೂರು ವಾರಕ್ಕೆ ಮೂರು ದಿನ ಸಂಚರಿಸುತ್ತಿವೆ. ಪಂಚಗಂಗಾ ಎಕ್ಸ್‌ಪ್ರೆಸ್‌ ಪಡೀಲು ಮೂಲಕ ಸಂಚರಿಸುತ್ತಿದೆ.

ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ಹೆಚ್ಚುವರಿಯಾಗಿ 1 ರಾತ್ರಿ ಹಾಗೂ 1 ಹಗಲು ರೈಲು ಆರಂಭಿಸಬೇಕಿದೆ. ಜತೆಗೆ ಮೈಸೂರು ಮಾರ್ಗವಾಗಿ ಸಾಗುತ್ತಿರುವ ರೈಲುಗಾಡಿಯನ್ನು ದಿನಂಪ್ರತಿ ಓಡಿಸಬೇಕು. ಇದಲ್ಲದೆ ಕಣ್ಣೂರು -ಬೆಂಗಳೂರು ಗಾಡಿ ಪ್ರಸ್ತುತ 16 ಬೋಗಿಗಳನ್ನು ಒಳಗೊಂಡಿದ್ದು ಇದಕ್ಕೆ ಹೆಚ್ಚುವರಿಯಾಗಿ ಇನ್ನೂ ಕೆಲವು ಬೋಗಿಗಳನ್ನು ಜೋಡಿಸಬೇಕು ಎಂಬ ಸಲಹೆಗಳು ರೈಲ್ವೇ ಬಳಕೆದಾರ ಸಂಘಟನೆಗಳಿಂದ ವ್ಯಕ್ತವಾಗಿವೆ.

ಶಿರಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತ ಹಿನ್ನಲೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಹೆಚ್ಚುವರಿಯಾಗಿ ರೈಲುಗಳನ್ನು ಓಡಿಸುವಂತೆ ಸಂಸದ ನಳಿನ್ ಕುಮಾರ್‌ ಕಟೀಲು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಮಾಡಿದ್ದಾರೆ.

Edited By : Vijay Kumar
PublicNext

PublicNext

19/07/2022 11:52 am

Cinque Terre

18.33 K

Cinque Terre

0

ಸಂಬಂಧಿತ ಸುದ್ದಿ