ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ ಮತ್ತು ಇತರ ರಸ್ತೆಗಳನ್ನು ತತ್ ಕ್ಷಣ ದುರಸ್ತಿಪಡಿಸುವಂತೆ ಆಗ್ರಹಿಸಿ ಸಾರ್ವಜನಿಕ ಪ್ರತಿಭಟನೆಯು ಬ್ರಹ್ಮಾವರ ಬಸ್ ನಿಲ್ದಾಣ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯಿತು.ಬ್ರಹ್ಮಾವರ ಸಾಮೂಹಿಕ ಸಂಘಟನೆಗಳ ನೇತೃತ್ವದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಮುಖ್ಯವಾಗಿ ದ್ವಿಚಕ್ರ ವಾಹನ ಸವಾರರು ತೀವ್ರ ಸಮಸ್ಯೆ ಅನುಭವಿಸುತ್ತಿದ್ದು ಇಲಾಖೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳ ಬೇಕೆಂದು ಆಗ್ರಹಿಸಿದರು.ಪ್ರತಿಭಟನೆ ಸಂದರ್ಭ ರಾಷ್ಟ್ರೀಯ ಹೆದ್ದಾರಿ ಹೊಂಡಗಳಲ್ಲಿ ಸಾಂಕೇತಿಕವಾಗಿ ಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದರು. ಶೇಖರ್ ಹಾವಂಜೆ, ಸದಾಶಿವ ಶೆಟ್ಟಿ ಬ್ರಹ್ಮಾವರ, ಸತೀಶ್ ಪೂಜಾರಿ ಬಾರಕೂರು ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
Kshetra Samachara
22/07/2022 03:13 pm