ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಗ್ರಾಮ ಒನ್ ಯೋಜನೆಯಿಂದ ಒಂದೇ ಸೂರಿನಡಿ ಸೌಲಭ್ಯ-ಅಪರ ಜಿಲ್ಲಾಧಿಕಾರಿ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗ್ರಾಮ ಒನ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆಯಡಿ ಸಾರ್ವಜನಿಕ ಆರೋಗ್ಯದ ಮಾಹಿತಿಯನ್ನು ಡಿಜಿಟಲೀಕರಣಗೊಳಿಸಿ, ಒಬ್ಬ ವ್ಯಕ್ತಿಯ ಆರೋಗ್ಯದ ಮಾಹಿತಿಯನ್ನು ಒಂದೇ ಸೂರಿನಡಿ ದೊರಕಿಸಿ ಆರೋಗ್ಯದ ಸೌಲಭ್ಯಗಳು ಸುಲಭವಾಗಿ ದೊರೆಯುವಂತೆ ಮಾಡಲು ಎ.ಬಿ.ಎಚ್.ಎ.ಕಾರ್ಡ್ ಯೋಜನೆಯನ್ನು ಪ್ರಾರಂಭಿಸಲಾಗಿದೆ.

ಈ ಕಾರ್ಡ್ ಹೊಂದಿದ ಫಲಾನುಭವಿಗಳು ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 5 ಲಕ್ಷ ರೂ.ವರೆಗೆ ಉಚಿತವಾಗಿ ಚಿಕಿತ್ಸೆ ಪಡೆಯಬಹುದಾಗಿದೆ ಹಾಗೂ ಚಿಕಿತ್ಸೆಯ ಮಾಹಿತಿಯೂ ಕೂಡ ದೇಶದ ಯಾವುದೇ ಭಾಗದಲ್ಲಿ ಆನ್‌ಲೈನ್ ಮೂಲಕ ಪಡೆಯಬಹುದಾಗಿದೆ. ಕಾರ್ಡ್‌ ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಗ್ರಾಮ ಒನ್ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ತಿಳಿಸಿದ್ದಾರೆ

Edited By : Nagaraj Tulugeri
Kshetra Samachara

Kshetra Samachara

29/08/2022 09:42 pm

Cinque Terre

22.85 K

Cinque Terre

0

ಸಂಬಂಧಿತ ಸುದ್ದಿ