ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ನಗರ ಆರೋಗ್ಯ ಕೇಂದ್ರದ ಅವ್ಯವಸ್ಥೆ ಸರಿಪಡಿಸದಿದ್ದಲ್ಲಿ ಮೇಯರ್ ಕಚೇರಿಗೆ ಮುತ್ತಿಗೆಯ ಎಚ್ಚರಿಕೆ

ಮಂಗಳೂರು: ಲೇಡಿಹಿಲ್ ನಗರ ಆರೋಗ್ಯ ಕೇಂದ್ರದಲ್ಲಿ ಸಣ್ಣ ಪುಟ್ಟ ರೋಗಗಳಿಗೂ ಚಿಕಿತ್ಸೆ ಲಭ್ಯವಾಗುತ್ತಿಲ್ಲ. ಕಳೆದ ಎರಡು ತಿಂಗಳುಗಳಿಂದ‌ ಅಗತ್ಯ ಜ್ವರಕ್ಕೆ ನೀಡುವಂತಹ ಮಾತ್ರೆಗಳು ಕೂಡಾ ಸರಬರಾಜು ಮಾಡದೇ ಮಂಗಳೂರು ಮನಪಾ ಜನರ ಆರೋಗ್ಯ ಕಾಳಜಿಯನ್ನು ಸಂಪೂರ್ಣವಾಗಿ ಕಡೆಗಣಿಸಿವೆ. ಇಂತಹ ಸಮಸ್ಯೆಗಳನ್ನು ಬಗೆಹರಿಸದಿದ್ದಲ್ಲಿ ಮುಂದಿನ ದಿನ ಮೇಯರ್ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನೀಲ್ ಕುಮಾರ್ ಬಜಾಲ್ ಎಚ್ಚರಿಸಿದರು.

ಲೇಡಿಹಿಲ್ ನಗರ ಆರೋಗ್ಯ ಕೇಂದ್ರವನ್ನು ಮೂಲಭೂತ ಸೌಕರ್ಯಗಳ ಸಹಿತ ಮೇಲ್ದರ್ಜೆಗೇರಿಸಲು ಒತ್ತಾಯಿಸಿ ಹಾಗೂ ಖಾಲಿ ಇರುವ ನಗರ ಆರೋಗ್ಯಾಧಿಕಾರಿ ಹುದ್ದೆಯನ್ನು ಭರ್ತಿಗೊಳಿಸಲು ಆಗ್ರಹಿಸಿ ಲೇಡಿಹಿಲ್ ನಗರ ಆರೋಗ್ಯ ಕೇಂದ್ರದ ಮುಂಭಾಗ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಮಂಗಳೂರು ಮನಪಾ ನಗರ ಆರೋಗ್ಯ ಕೇಂದ್ರವನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ನಡೆಸಲು ಗುತ್ತಿಗೆ ನೀಡುವ ಮೂಲಕ ಖಾಸಗಿ ಲಾಭಿಗೆ ಮಣಿದಿದೆ.

ನಗರದ ಜನರ ಆರೋಗ್ಯ ಕಾಳಜಿ ವಹಿಸಬೇಕಾಗಿದ್ದ ನಗರ ಆರೋಗ್ಯ ಕೇಂದ್ರ ಇಂದು ನರಕ ಆರೋಗ್ಯ ಕೇಂದ್ರವಾಗಿ ಪರಿವರ್ತನೆಗೊಂಡಿದೆ. ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಜನರ ತೆರಿಗೆ ಹಣವನ್ನು ಲೂಟಿ ಮಾಡುವ ಬಿಜೆಪಿ ಸರಕಾರಕ್ಕೆ ನಗರ ಆರೋಗ್ಯ ಅವ್ಯವಸ್ಥೆ ಕಣ್ಣಿಗೆ ಕಾಣುತ್ತಿಲ್ಲವೆ ಎಂದು ಪ್ರಶ್ನಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂತೋಷ್ ಕುಮಾರ್ ಬಜಾಲ್, ಇತ್ತೀಚೆಗೆ ಲೇಡಿಹಿಲ್ ನಗರ ಆರೋಗ್ಯ ಕೇಂದ್ರದಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೆ ಸಣ್ಣ ಪುಟ್ಟ ರೋಗಗಳಿಗೂ ಚಿಕಿತ್ಸೆ ಲಭ್ಯವಾಗದೆ ರೋಗಿಗಳು ಪರದಾಡುವಂತಾಗಿದೆ.

ಮಂಗಳೂರು ಮನಪಾ ಬಿಜೆಪಿ ಆಡಳಿತ ಸಂಪೂರ್ಣವಾಗಿ ಇದನ್ನು ಕಡೆಗಣಿಸಿದೆ. ರಾಷ್ಟೀಯ ನಗರ ಆರೋಗ್ಯ ಅಭಿಯಾನದಡಿಯಲ್ಲಿ ಆರೋಗ್ಯ ಇಲಾಖೆ ನಡೆಸುವ 10 ನಗರ ಆರೋಗ್ಯ ಕೇಂದ್ರದಲ್ಲೂ ವೈದ್ಯರು ಸಹಿತ ಹಲವಾರು ಗಂಭೀರ ಸಮಸ್ಯೆಗಳಿವೆ. ಇದನ್ನು ಸರಿಪಡಿಸದೆ ಮತ್ತೆ 7 ನಗರ ಆರೋಗ್ಯ ಕೇಂದ್ರಗಳು ನಗರ ಪಾಲಿಕೆ ವ್ಯಾಪ್ತಿಯಡಿಯಲ್ಲಿ ಬರಲಿದೆ. ಅದನ್ನೂ ನಡೆಸುವಲ್ಲಿ ಸರಕಾರಗಳು ವಿಫಲವಾದಲ್ಲಿ ನಮ್ಮ ಹೋರಾಟವನ್ನು ತೀವ್ರವಾಗಲಿದೆ ಎಂದು ಎಚ್ಚರಿಸಿದರು.

Edited By : Abhishek Kamoji
Kshetra Samachara

Kshetra Samachara

16/09/2022 06:47 pm

Cinque Terre

12.19 K

Cinque Terre

2

ಸಂಬಂಧಿತ ಸುದ್ದಿ