ಉಡುಪಿ: ಮಲ್ಪೆ ತೀರ್ಥಹಳ್ಳಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ಎ ಇಂದ್ರಾಳಿ ರೈಲ್ವೆ ಸೇತುವೆ ಬಳಿ ರಸ್ತೆ ಕಾಮಗಾರಿ ಭರದಿಂದ ಸಾಗಿದೆ. ಕಾಮಗಾರಿ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಇಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಈ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಇದನ್ನು ತಕ್ಷಣ ದುರಸ್ಥಿಗೊಳಿಸಬೇಕೆಂದು ಇತ್ತೀಚೆಗೆ ರಸ್ತೆಯಲ್ಲೇ ಉರುಳುಸೇವೆ ಕೂಡ ನಡೆದಿತ್ತು.
ಉಡುಪಿ-ಮಣಿಪಾಲ ನಡುವಿನ ಇಂದ್ರಾಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ತಾಂತ್ರಿಕ ಕಾರಣಗಳಿಂದ ಬಹಳ ಸಮಯದಿಂದ ಸ್ಥಗಿತಗೊಂಡಿತ್ತು. ಇದರಿಂದ ಲಘು ಹಾಗೂ ಘನ ವಾಹನಗಳು ಸಂಚಾರಕ್ಕಾಗಿ ಪ್ರಯಾಸ ಪಡಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿತ್ತು. ಇದೀಗ ಮಳೆ ಕ್ಷೀಣಗೊಂಡ ಕಾರಣ ಮತ್ತು ರಸ್ತೆ ತೀವ್ರ ಹದಗೆಟ್ಟ ಕಾರಣ ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.
PublicNext
05/10/2022 06:59 pm