ಕಾಪು: ಕಳೆದ ಕೆಲವು ದಿನಗಳಿಂದ ವಿದ್ಯುತ್ ಕಂಬವೊಂದು ಪೊದೆಯೆಡಿಯಲ್ಲಿ ಮರೆಯಾಗಿರುವ ಬಗ್ಗೆ ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗಳ ಗಮನಕ್ಕೆ ತಂದರೂ, ಈ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವ ಪಡುಬಿದ್ರಿ ಮೆಸ್ಕಾಂ ಕಚೇರಿಯ ವಿರುದ್ಧ ಬೀಡು ಬಳಿ ನಿವಾಸಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಅತೀ ಸಮೀಪದಲ್ಲೇ ಮೆಸ್ಕಾಂ ಇಲಾಖೆ ಸಮೀಪದಲ್ಲಿಯೇ ವಿದ್ಯುತ್ ಕಂಬ ಪೊದೆಯೆಡೆಯಲ್ಲಿ ಇಣುಕುತ್ತಿದ್ದು, ಸದಾ ಹೊತ್ತು ಈ ಭಾಗದಲ್ಲಿ ಮೆಸ್ಕಾಂ ಸಿಬ್ಬಂದಿಗಳು ಸಹಿತ ಅಧಿಕಾರಿಗಳು ಸಂಚರಿಸುತ್ತಿದ್ದರೂ... ಈ ವಿದ್ಯುತ್ ಕಂಬದ ದುಸ್ಥಿತಿಯನ್ನು ಸುಸ್ಥಿತಿಗೆ ತರಲು ಮುಂದಾಗದಿರುವುದು ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ.
Kshetra Samachara
11/10/2022 07:00 pm