ಉಡುಪಿ: ವೇತನ ಹೆಚ್ಚಳ, ಭತ್ಯೆ ನೀಡುವಂತೆ ಒತ್ತಾಯಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುತ್ತಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ಒಂದು ವಾರ ಮನೆಯಲ್ಲಿದ್ದು ಅಸಹಕಾರ ಚಳುವಳಿ ಮಾಡಿದ್ದ ಗುತ್ತಿಗೆ ಆಧಾರಿತ ಆರೋಗ್ಯ ಸಿಬ್ಬಂದಿ, ಇಂದು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಡಿಎಚ್ಒ ಕಚೇರಿ ಆವರಣದಲ್ಲಿ ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟಿಸಿದರು. ರಾಜ್ಯ ಸರ್ಕಾರ ಮತ್ತು ಆರೋಗ್ಯ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಧಿಕ್ಕಾರ ಕೂಗಿದರು. ಇಂದು ನಾವು ಎರಡನೇ ಹಂತದ ಪ್ರತಿಭಟನೆ ನಡೆಸುತ್ತಿದ್ದೇವೆ. ಸರಕಾರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಡಿಎಚ್ಒ ಡಾ. ಸುಧೀರ್ ಚಂದ್ರ ಸೂಡ ಮೂಲಕ ಪ್ರತಿಭಟನಾಕಾರರು ತಮ್ಮ ಒತ್ತಾಯವನ್ನು ಸರ್ಕಾರದ ಮುಂದಿಟ್ಟರು.
ಮನವಿ ಸ್ವೀಕರಿಸಿ ಮಾತನಾಡಿದ ಅವರು, ಕರ್ತವ್ಯವನ್ನು ಸದ್ಯ ಹಂಚಿಕೆ ಮಾಡಿ ನಿರ್ವಹಿಸುತ್ತಿದ್ದೇವೆ. ಪ್ರತಿಭಟನೆ ಮುಂದುವರಿದರೆ ಕೊರೊನಾ ಜೊತೆಗೆ ರಾಷ್ಟ್ರೀಯ ಕಾರ್ಯಕ್ರಮಗಳ ನಿರ್ವಹಣೆ ಕಷ್ಟ ಆಗಬಹುದು ಎಂದರು.
Kshetra Samachara
02/10/2020 03:14 pm