ಉಡುಪಿ: ಉಡುಪಿ ಜಿಲ್ಲೆ ರಚನೆಯಾಗಿ ಬರೋಬ್ಬರಿ 24 ವರ್ಷಗಳ ನಂತರ ಉಡುಪಿ ಜನರ ಕನಸು ನನಸಾಗುತ್ತಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ಮಾಡಲಿದ್ದಾರೆ. ಅಜ್ಜರಕಾಡಿನಲ್ಲಿರುವ ಸರಕಾರಿ ಜಮೀನಿನಲ್ಲಿ ನೂತನ ಜಿಲ್ಲಾಸ್ಪತ್ರೆ ತಲೆ ಎತ್ತಲಿದೆ.
ಸಿಎಂ ಬೊಮ್ಮಾಯಿ, ಆರೋಗ್ಯ ಸಚಿವ ಸುಧಾಕರ್ ಗುದ್ದಲಿ ಪೂಜೆ ನಡೆಸಲಿದ್ದಾರೆ. ಸಿಎಂ ಆಗಮನಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಮೈದಾನದ ಸುತ್ತ ಬೆಳೆದಿರುವ ಗಿಡಗಂಟಿಗಳನ್ನು ನಗರಸಭೆ ಸ್ವಚ್ಛ ಮಾಡಿಸುತ್ತಿದೆ.
ಸಿಎಂ ಆದ ನಂತರ ಮೊದಲ ಬಾರಿಗೆ ಉಡುಪಿಗೆ ಬರುತ್ತಿರುವ ಬಸವರಾಜ ಬೊಮ್ಮಾಯಿ ಅವರು ಕೊರೋನಾ ನಿಯಂತ್ರಣದ ಸಲುವಾಗಿ ಜಿಲ್ಲಾಮಟ್ಟದ ಅಧಿಕಾರಿಗಳ ಮತ್ತು ವೈದ್ಯಾಧಿಕಾರಿಗಳ ಸಭೆಯನ್ನೂ ನಡೆಸಲಿದ್ದಾರೆ.
Kshetra Samachara
11/08/2021 07:42 pm