ಉದ್ಯಾವರ: ಉಡುಪಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಂಸ್ಥೆಯ ಆಯುರ್ವೇದ ಆಸ್ಪತ್ರೆ ಕಟ್ಟಡವನ್ನು ಕೇಂದ್ರ ಆಯುಷ್ ಇಲಾಖೆ ,ಬಂದರು ಜಲಸಾರಿಗೆ ಸಚಿವ ಸರ್ಬಾನಂದ ಸೋನಾವಾಲ ಉದ್ಘಾಟಿಸಿದರು.
ರತ್ನಶ್ರೀ- ಆರೋಗ್ಯಧಾಮ ಹೆಸರಿನ ನೂತನ ಆಸ್ಪತ್ರೆಯು ಸಂಪೂರ್ಣ ಆಯುರ್ವೇದ ಚಿಕಿತ್ಸೆಯನ್ನು ಒಳಗೊಂಡಿದೆ.ಕೇಂದ್ರ ಸಚಿವ ಸರ್ಬಾನಂದ ಸೋನಾವಾಲ ಜೊತೆಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಆಸ್ಪತ್ರೆ ಉದ್ಘಾಟಿಸಿದರು.
ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಕೋಟ ಶ್ರೀನಿವಾಸ ಪೂಜಾರಿ,ಶಾಸಕ ರಘುಪತಿ ಭಟ್ ಸಹಿತ ಗಣ್ಯಾತಿಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾದರು.
Kshetra Samachara
25/09/2021 02:31 pm