ಉಡುಪಿ: ಉಡುಪಿಯ ಬಿ.ಆರ್ ಶೆಟ್ಟಿ ಸರಕಾರಿ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಫೆ.21 ನಿನ್ನೆಯಿಂದ ಆಸ್ಪತ್ರೆಯ ಬಹುತೇಕ ಸೇವೆಗಳು ಸ್ಥಗಿತಗೊಂಡಿದ್ದು ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯರು ಮತ್ತು ಮಕ್ಕಳು ಪರದಾಡಬೇಕಾಯಿತು.
ಕಳೆದ ಮೂರು ತಿಂಗಳಿನಿಂದ ಇಲ್ಲಿನ ವೈದ್ಯರು ಮತ್ತು ವೈದ್ಯೇತರ ಸಿಬ್ಬಂದಿಗೆ ವೇತನ ಪಾವತಿಯಾಗಿಲ್ಲ. ಹೀಗಾಗಿ ಸಿಬ್ಬಂದಿ ಪ್ರತಿಭಟನೆ ಮಾಡುತ್ತಿದ್ದು ಈ ಪ್ರತಿಭಟನೆಗೆ ಇಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಂಬಲ ಸೂಚಿಸಿದರು.
ಪಿಪಿಪಿ ಮಾದರಿಯ ಆಸ್ಪತ್ರೆ ಇದಾಗಿದ್ದು ,ಉದ್ಯಮಿ ಬಿ.ಆರ್ ಶೆಟ್ಟಿ ಸರಕಾರದೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದಿದ್ದಾರೆ. ಸದ್ಯ ದಿವಾಳಿಯಾಗಿರುವ ಬಿ.ಆರ್ ಶೆಟ್ಟಿ ಸಂಸ್ಥೆಗೆ ಆಸ್ಪತ್ರೆ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.
Kshetra Samachara
22/02/2022 10:10 pm