ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮಿಶನ್ ಆಸ್ಪತ್ರೆಗೆ ಶತಮಾನೋತ್ಸವ ಸಂಭ್ರಮ: ಜೂ.15 ರಿಂದ ವಿವಿಧ ಕಾರ್ಯಕ್ರಮ

ಉಡುಪಿ: ಉಡುಪಿಯ ಪ್ರಸಿದ್ಧ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ ಶತಮಾನೋತ್ಸವ ಸಂಭ್ರಮಾಚರಣೆಯಲ್ಲಿದೆ. ಇದರ ಉದ್ಘಾಟನಾ ಸಮಾರಂಭ ಜೂನ್ 15 ರಂದು ನಡೆಯಲಿದೆ.

ಈ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ ಸುಶೀಲ್ ಜತ್ತನ್ನ, ಉದ್ಘಾಟನಾ ಸಮಾರಂಭವು ಮೂರು ಕಾರ್ಯಕ್ರಮಗಳನ್ನು ಒಳಗೊಂಡಿರುತ್ತದೆ.ಜೂನ್ 15 ರಂದು ಬೆಳಗ್ಗೆ 9 ಗಂಟೆಗೆ ರಕ್ತದಾನ ಶಿಬಿರ, ನಂತರ 3 ಗಂಟೆಗೆ ದೇವರಿಗೆ ಧನ್ಯವಾದ ಸಮರ್ಪಣೆ ಮತ್ತು ಸಂಜೆ 5 ಗಂಟೆಗೆ ನರ್ಸಿಂಗ್ ಕಾಲೇಜಿನ ಹೊಸ ಬ್ಲಾಕ್, ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ ಎಂದರು.

ರಕ್ತದಾನ ಶಿಬಿರವನ್ನು ಉಡುಪಿ ಬಡಗಬೆಟ್ಟು ಸಂಘದ ಮಹಾಪ್ರಬಂಧಕ ಜಯಕರ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮಿಷನ್ ಆಸ್ಪತ್ರೆ ಚಾಪೆಲ್‌ನಲ್ಲಿ ಸಿಎಸ್‌ಐ ಕರ್ನಾಟಕ ದಕ್ಷಿಣ ಧರ್ಮಪ್ರಾಂತ್ಯದ ಉಪಾಧ್ಯಕ್ಷೆ ವಂದನೀಯ ಭಗಿನಿ ಸುಜಾತಾ ಅವರ ನೇತೃತ್ವದಲ್ಲಿ ಕೃತಜ್ಞತಾ ಸೇವೆ ನಡೆಯಲಿದೆ. ಲೊಂಬಾರ್ಡ್ ಆಸ್ಪತ್ರೆ ಆವರಣದಲ್ಲಿ ಸಂಜೆ 5 ಗಂಟೆಗೆ ಮುಖ್ಯ ಕಾರ್ಯಕ್ರಮ ನಡೆಯಲಿದೆ. ನರ್ಸಿಂಗ್ ಕಾಲೇಜಿನ ಹೊಸ ಬ್ಲಾಕ್ ಅನ್ನು ನಿಟ್ಟೆ ಡೀಮ್ಡ್ ವಿಶ್ವವಿದ್ಯಾನಿಲಯದ ಕುಲಪತಿ ಮತ್ತು ನಿಟ್ಟಿ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷರಾದ ವಿನಯ್ ಹೆಗ್ಡೆ ಅವರು ಉದ್ಘಾಟಿಸಲಿದ್ದಾರೆ.ಸಮಾರಂಭದ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಭಾಗವಹಿಸಲಿದ್ದಾರೆ ಎಂದರು.

Edited By :
Kshetra Samachara

Kshetra Samachara

13/06/2022 02:50 pm

Cinque Terre

3.87 K

Cinque Terre

0

ಸಂಬಂಧಿತ ಸುದ್ದಿ