ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಇಂದಿನಿಂದ ಬೂಸ್ಟರ್ ಡೋಸ್; ಜಿಲ್ಲಾಧಿಕಾರಿ ಚಾಲನೆ

ಉಡುಪಿ: ಜಿಲ್ಲೆಯು ಕೊರೊನಾ 1 ಮತ್ತು 2ನೇ ಡೋಸ್ ಲಸಿಕೆ ನೀಡಿಕೆಯಲ್ಲಿ ಈಗಾಗಲೇ ಶೇ 100 ಗುರಿ ಸಾಧಿಸಲಾಗಿದೆ. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮುನ್ನೆಚ್ಚರಿಕೆ ಡೋಸ್ ನೀಡುವ ಉದ್ದೇಶದಿಂದ ಸಾರ್ವಜನಿಕರಿಗೆ ಸೆ.30ರ ವರೆಗೆ ಉಚಿತ ಮುನ್ನೆಚ್ಚರಿಕೆ ಡೋಸ್ ನೀಡುವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು.

ಜಿಲ್ಲೆಯಲ್ಲಿ ಈಗಾಗಲೇ 18 ವರ್ಷ ಮೇಲ್ಪಟ್ಟ 10,04,712 ಫಲಾನುಭವಿಗಳು ಮೊದಲ ಡೋಸ್‌ ಪಡೆದು ಶೇ.100.57 ಹಾಗೂ 10,00,092 ಮಂದಿ ಎರಡನೇ ಡೋಸ್‌ ಪಡೆದಿದ್ದು, ಶೇ.100.11 ಸಾಧನೆ ಆಗಿದೆ. ಮುನ್ನೆಚ್ಚರಿಕೆ ಡೋಸ್‌ ಪಡೆಯಲು ಜಿಲ್ಲೆಯಲ್ಲಿ 18 ರಿಂದ 59 ವರ್ಷದ 8,00,000 ಫಲಾನುಭವಿಗಳಿದ್ದಾರೆ. 18 ವರ್ಷ ಮೇಲ್ಪಟ್ಟ, 2ನೇ ಡೋಸ್‌ ಲಸಿಕೆ ಪಡೆದು 6 ತಿಂಗಳು ದಾಟಿದ ಸಾರ್ವಜನಿಕರು ಇಂದಿನಿಂದ ಹತ್ತಿರದ ಸರಕಾರಿ ಆರೋಗ್ಯ ಕೇಂದ್ರಗಳ ಹೋಗಿ ಉಚಿತವಾಗಿ ಲಸಿಕೆ ಪಡೆಯಬಹುದು.

ಜಿ.ಪಂ. ಹಾಗೂ ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್‌-19 ಮುನ್ನೆಚ್ಚರಿಕೆ ಡೋಸ್‌ ಉಚಿತ ಲಸಿಕೆ ನೀಡುವ ಅಭಿಯಾನಕ್ಕೆ ಇಂದು (ಜು.18 )ಬೆಳಗ್ಗೆ 10ಕ್ಕೆ ಅಜ್ಜರಕಾಡು ಜಿಲ್ಲಾ ಆಯುಷ್‌ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಚಾಲನೆ ನೀಡಿದರು.

Edited By :
Kshetra Samachara

Kshetra Samachara

18/07/2022 01:33 pm

Cinque Terre

16.93 K

Cinque Terre

0

ಸಂಬಂಧಿತ ಸುದ್ದಿ