ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಜಿಲ್ಲಾಧಿಕಾರಿಗಳ ಭೇಟಿ; ಸಾರ್ವಜನಿಕರ ಕುಂದು ಕೊರತೆ ಪರಿಶೀಲನೆ

ಮುಲ್ಕಿ: ಮುಲ್ಕಿ ತಾಲೂಕು ಕಚೇರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆ ಹಾಗೂ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು.

ಮುಲ್ಕಿ ತಾಲೂಕು ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ ಕಾಡುತ್ತಿದ್ದು ಪಡಿತರ ಪೂರೈಕೆಗೆ ತೀವ್ರ ತೊಂದರೆಯಾಗಿದೆ, ಸರಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಕೊರತೆ, ಭೂಮಿ ಮಾರಾಟಕ್ಕೆ 11ಇ ನಕ್ಷೆ ಸಮಸ್ಯೆ, ನಗರದ ನದಿ ತೀರದ ಪ್ರದೇಶದಲ್ಲಿ ಸಿಆರ್ ಝಡ್ ಪ್ರದೇಶದಲ್ಲಿ ಮನೆ ಕಟ್ಟುವವರಿಗೆ ತೊಂದರೆಯಾಗಿದ್ದು ಸಮಸ್ಯೆ ಪರಿಹಾರದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ಕಾಡುತ್ತಿದ್ದು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಜೊತೆ ಒಡಂಬಡಿಕೆ ಮೂಲಕ ಪಂಚಾಯತ್ ವ್ಯಾಪ್ತಿಯ ಎಳತ್ತೂರು ಬಳಿ ಸುಮಾರು ಎರಡು ಎಕರೆ ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿಗೆ ಶಾಸಕರ ಜೊತೆ ಮಾತುಕತೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಮುಲ್ಕಿ ಬಸ್ಸ್ ನಿಲ್ದಾಣಕ್ಕೆ ಸರಕಾರದಿಂದ ಮೂರು ಕೋಟಿ ರೂಪಾಯಿ ಮಂಜುರಾಗಿದ್ದರೂ ಕಾಮಗಾರಿ ನಡೆದಿಲ್ಲ, ನಗರ ವ್ಯಾಪ್ತಿಯಲ್ಲಿ ಸುಮಾರು 14 ಕೋಟಿ ರೂಪಾಯಿ ವೆಚ್ಚದ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ನಡೆದಿದ್ದರೂ ಕಾರ್ಯಗತಗೊಂಡಿಲ್ಲ, ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆಯಲ್ಲಿ ಮೂರು ಅಪಘಾತ ವಲಯ ಪ್ರದೇಶಗಳಿದ್ದು ಸರಿಯಾದ ಸರ್ವಿಸ್ ರಸ್ತೆ ಇನ್ನೂ ನಡೆದಿಲ್ಲ, ಎಂಬ ದೂರಿಗೆ ಜಿಲ್ಲಾಧಿಕಾರಿಗಳು ಉತ್ತರಿಸಿ ಪರಿಹಾರ ನೀಡುವ ಭರವಸೆ ನೀಡಿದರು.

ಮುಲ್ಕಿಯ ತಹಶಿಲ್ದಾರ್ ಸಚ್ಚಿದಾನಂದ ಕುಚನೂರು, ಉಪತಹಶಿಲ್ದಾರ್ ದಿಲೀಪ್ ರೋಡ್ಕರ್, ಆರ್ ಐ ದಿನೇಶ್ ಹಾಗೂ ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರ ಪೂಜಾರಿ ಮತ್ತಿತರರು ಇದ್ದರು.

Edited By : Somashekar
Kshetra Samachara

Kshetra Samachara

27/09/2022 05:38 pm

Cinque Terre

5.43 K

Cinque Terre

0

ಸಂಬಂಧಿತ ಸುದ್ದಿ