ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು : ಪೌರಕಾರ್ಮಿಕ ದಿನಾಚರಣೆಯನ್ನು ಕಾಪು ಪುರಸಭೆಯಲ್ಲಿ ವಿಶೇಷ ರೀತಿಯಲ್ಲಿ ಆಚರಣೆ

ಕಾಪು‌ : ಪೌರಕಾರ್ಮಿಕ ದಿನಾಚರಣೆಯನ್ನು ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ, ಬಹುಮಾನ ವಿತರಿಸಿ, ಎಲ್ಲಾ ಪೌರ ಕಾರ್ಮಿಕರನ್ನೂ ಸಮ್ಮಾನಿಸಿ, ಸಹ ಭೋಜನದೊಂದಿಗೆ ಪೌರ ಕಾರ್ಮಿಕ ದಿನಾಚರಣೆಯನ್ನು ವಿಶೇಷ ರೀತಿಯಲ್ಲಿ ಆಯೋಜಿಸಲಾಯಿತು.

ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿದ್ದ ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಮಾತನಾಡಿ, ಪೌರ ಕಾರ್ಮಿಕರ ಪ್ರಾಮಾಣಿಕ ಸೇವೆಯಿಂದಾಗಿಯೇ ಕಾಪು ಪುರಸಭೆಗೆ ವಿಶೇಷ ಗೌರವ ಸಿಗುವಂತಾಗಿದೆ. ಪೌರ ಕಾರ್ಮಿಕರನ್ನು ಗುರುತಿಸಿ, ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.

ಕಾಪು ಪುರಸಭೆಯ ಪೌರ ಕಾರ್ಮಿಕರು ಕರೋನ ಸಂದರ್ಭದಲ್ಲಿ ನೀಡಿದ ಸೇವೆಯೇ ಸ್ಮರಣೀಯವಾಗಿದ್ದು,

ಪೌರ ಕಾರ್ಮಿಕರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ದೊರಕಿಸಿಕೊಡುವ ಪ್ರಯತ್ನ ಮುಂದುವರಿಯಲಿದೆ ಎಂದರು‌.

ಈ ಸಂದರ್ಭ ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ , ದೇವರಾಜ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಶೈಲಾ ದೇಶಪಾಂಡೆ, ಸಮಾಜ ಕಲ್ಯಾಣ ಇಲಾಖೆಯ ಪತ್ರಾಂಕಿತ ಅಧೀಕ್ಷಕ ರೋಷನ್ ಕುಮಾರ್, ಮಾಜಿ ಅಧ್ಯಕ್ಷ ಅನಿಲ್ ಕುಮಾರ್ ಮತ್ತಿತರು ಉಪಸ್ಥಿತರಿದ್ದರು.

Edited By : Shivu K
Kshetra Samachara

Kshetra Samachara

23/09/2021 05:22 pm

Cinque Terre

10.51 K

Cinque Terre

0

ಸಂಬಂಧಿತ ಸುದ್ದಿ