ಉಡುಪಿ:ಉಡುಪಿ ನಗರಸಭೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆಯನ್ನು ಪುರಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೆಶಕಿ ಪ್ರತಿಭಾ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ,ಅವರು ಪೌರ ಕಾರ್ಮಿಕರು ತಾವು ಮಾಡುವ ಕೆಲಸದಲ್ಲಿ ಕೀಳರಿಮೆ ಇಟ್ಟುಕೊಳ್ಳದೇ ತಾವು ಮಾಡುವ ಕೆಲಸದಿಂದ ದೇಶಕ್ಕೆ ಒಳಿತಾಗುತ್ತದೆ ಎಂಬ ಮನೋಭಾವನೆಯನ್ನು ಬೆಳೆಸಿಕೊಂಡು ಕಾರ್ಯ ಮಾಡಬೇಕು. ಮಾತ್ರವಲ್ಲದೇ ಪೌರ ಕಾರ್ಮಿಕರರನ್ನು ಇತರರೂ ಕೀಳಾಗಿ ಕಾಣುವುದು ತಪ್ಪು. ಇತರ ಕಡೆಗಳಲ್ಲಿ ಪೌರ ಕಾರ್ಮಿಕರನ್ನು ಕೆಟ್ಟದಾಗಿ ದುಡಿಸಿಕೊಳ್ಳುತ್ತಾರೆ. ಆದರೆ ಉಡುಪಿಯಲ್ಲಿ ಅಂತಹ ಯಾವುದೇ ಘಟನೆ ನಡೆದಿಲ್ಲ. ಇದು ಆಶಾದಾಯಕವಾಗಿದ್ದು ಸರಕಾರದಿಂದ ಸಿಗುವ ಅನೇಕ ಸೌಲಭ್ಯಗಳ ಬಗ್ಗೆ ಪೌರಕಾರ್ಮಿಕರಿಗೆ ಸರಿಯಾದ ಮಾಹಿತಿ ಇಲ್ಲ. ಅವರಿಗೆ ಸರಿಯಾದ ಮಾಹಿತಿ ನೀಡಿದರೆ ಯೋಜನೆಯ ಫಲಾನುಭವಿಯಾಗಲು ಸಾದ್ಯ.ಈ ನಿಟ್ಟಿನಲ್ಲಿ ನಗರಸಭೆ ಅಧಿಕಾರಿಗಳು ಮಾಹಿತಿ, ಮಾರ್ಗದರ್ಶನ ಮಾಡಬೇಕು ಎಂದರು.
ಪೌರ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಪೌರ ಕಾರ್ಮಿಕರಿಗೆ ಸನ್ಮಾನ, ಕುದ್ರೋಳಿ ಗಣೇಶ್ ಅವರಿಂದ ಜಾದು ಕಾರ್ಯಕ್ರಮ, ಆರೋಗ್ಯ ತಪಾಸಣೆ ನಡೆಯಿತು.
ಕಾರ್ಯಕ್ರಮದಲ್ಲಿ ನಗರಸಭೆಯ ಅದ್ಯಕ್ಷೆ ಸುಮಿತ್ರಾ ನಾಯಕ್, ಉಪಾದ್ಯಕ್ಷೆ ಲಕ್ಷ್ಮೀ ಮಂಜುನಾಥ್ ಸಾಲ್ಯಾನ್, ಸ್ಥಾಯಿ ಸಮಿತಿ ಅದ್ಯಕ್ಷ ಗಿರೀಶ್ ಆಂಚನ್, ನಗರಸಭಾ ಸದಸ್ಯ ಕೃಷ್ಣರಾವ್ ಕೊಡಂಚ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ನಾಗರತ್ನ , ಪೌರಾಯುಕ್ತ ಉದಯ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
Kshetra Samachara
23/09/2021 05:59 pm