ಉಡುಪಿ: ಕಾಂಕ್ರೀಟ್ ರಸ್ತೆ ಕುಸಿದ ಪರಿಣಾಮ ಚಲಿಸುತ್ತಿದ್ದ ಟಿಪ್ಪರೊಂದು ಪಲ್ಟಿಯಾಗಿ ಹೊಳೆಗೆ ಬಿದ್ದ ಘಟನೆ ಉಡುಪಿ ಸಮೀಪದ ಕಿದಿಯೂರು ಸಂಕೇಶ್ವರ ರಸ್ತೆಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಮಣ್ಣು ತುಂಬಿದ ಟಿಪ್ಪರೊಂದು ಸಂಚರಿಸುತ್ತಿದ್ದಾಗ ಕಾಂಕ್ರೀಟ್ ರಸ್ತೆಯಲ್ಲಿ ಕುಸಿದು ಪಲ್ಟಿಯಾಗಿದೆ.
ರಸ್ತೆಯಲ್ಲಿ ಬಿರುಕು ಬಿಟ್ಟು ಸಂಪೂರ್ಣ ಕುಸಿದ ಪರಿಣಾಮ ಟಿಪ್ಪರ್ ಸಮೀಪದ ಕಲ್ಮಾಡಿ ಹೊಳೆಗೆ ಉರುಳಿ ಬಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಅಪಘಾತದಲ್ಲಿ ಚಾಲಕ ನಿರ್ವಾಹರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.
Kshetra Samachara
07/05/2022 12:45 pm