ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಣಸೆ ಮಕ್ಕಿ ಸಮಸ್ಯೆ ಪರಿಹಾರಕ್ಕೆ ಬದ್ಧ : ಶಾಸಕ ಸುಕುಮಾರ್ ಶೆಟ್ಟಿ ಭರವಸೆ

ಬೈಂದೂರು: ತಾಲೂಕಿನ ಕಾಲ್ತೋಡು ಗ್ರಾಮದ ಎಳಜಿತ್, ಹುಣಸೇ ಮಕ್ಕಿ ಪ್ರದೇಶದ ಮೂಲ ಸೌಲಭ್ಯಗಳ ಬಗ್ಗೆ ಪಬ್ಲಿಕ್ ನೆಕ್ಸ್ಟ್ ಪ್ರಸಾರ ಮಾಡಿದ ವರದಿಗೆ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಸ್ಪಂದಿಸಿದ್ದಾರೆ.

ಇಲ್ಲಿಗೆ ಅಂಗಗನವಾಡಿ ವ್ಯವಸ್ಥೆ ಕಲ್ಪಿಸಲು ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು, ರಸ್ತೆ ಅಭಿವೃದ್ಧಿಗೆ ಅನುದಾನ ನೀಡಲಾಗುವುದು, ಒಟ್ಟಾರೆಯಾಗಿ ಅಲ್ಲಿನ ಮೂಲಭೂತ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದಿದ್ದಾರೆ. ಈ ಬಗ್ಗೆ ಪಬ್ಲಿಕ್ ನೆಕ್ಸ್ಟ್ ಜೊತೆಗೆ ಮಾತನಾಡಿದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಪಬ್ಲಿಕ್ ನೆಕ್ಸ್ಟ್ ಬೆಳಕು ಚೆಲ್ಲುತ್ತಿರುವುದು ಸಂತಸದ ವಿಚಾರ ಎಂದಿದ್ದಾರೆ

ಜಯಶೇಖರ್ ಮಡಪ್ಪಾಡಿ, ಪಬ್ಲಿಕ್ ನೆಕ್ಸ್ಟ್ ಕುಂದಾಪುರ

Edited By : Somashekar
PublicNext

PublicNext

15/08/2022 09:29 pm

Cinque Terre

50.76 K

Cinque Terre

0

ಸಂಬಂಧಿತ ಸುದ್ದಿ