ಉಡುಪಿ: ಉಡುಪಿ ಜಿಲ್ಲಾ ನ್ಯಾಯಾಲಯದ ಮೂರನೇ ಮಹಡಿ ಮತ್ತು ನೂತನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯವನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ,ಎಸ್ ಅಬ್ದುಲ್ ನಝೀರ್ ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಸಭಾ ಕಾರ್ಯಕ್ರಮ ನಡೆಯಿತು.ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಜಸ್ಟಿಸ್ ಎಸ್.ಅಬ್ದುಲ್ ನಝೀರ್ ,ನ್ಯಾಯಾಲಯಗಳ ಸಂಖ್ಯೆ ಹೆಚ್ಚಿದರೆ ಸಾಲದು,ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಬೇಕು ಎಂದರು.
ಇದೇ ವೇಳೆಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ವಕೀಲರಿಗೆ ಕುಳಿತುಕೊಳ್ಳಲು ವಕೀಲರ ಭವನ ಇಲ್ಲದೇ ಇರುವುದಕ್ಕೆ ಆಶ್ಚರ್ಯ ವ್ಯಕ್ತಪಡಿಸಿದರು,ಮಾತ್ರವಲ್ಲ ವೇದಿಕೆಯಲ್ಲಿದ್ದ ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಅವರ ಗಮನಕ್ಕೆ ತಂದರು.ತಕ್ಷಣ ಸಚಿವರು , ಶೀಘ್ರ ವಕೀಲರ ಭವನ ನಿರ್ಮಿಸುವ ಭರವಸೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ಥಿ, ಹೈಕೋರ್ಟ್ ಮತ್ತು ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ರಂಗಸ್ವಾಮಿ ನಟರಾಜ್, ರಿಜಿಸ್ಟಾರ್ ಜನರಲ್ ಟಿ.ಜಿ. ಶಿವಶಂಕರೇ ಗೌಡ, ಕಾನೂನು ಇಲಾಖೆಯ ಪ್ರ.ಕಾರ್ಯದರ್ಶಿ ಟಿ. ವೆಂಕಟೇಶ ನಾಯ್ಕ್, ಲೋಕೋಪಯೋಗಿ ಮುಖ್ಯ ಇಂಜಿನಿಯರ್ ಕಾಂತರಾಜಯ ಬಿ.ಟಿ ಉಪಸ್ಥಿತರಿದ್ದರು.ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್ ವರದಿ ಮಂಡಿಸಿದರು.ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಸುಬ್ರಹ್ಮಣ್ಯ ಜೆ.ಎನ್ ಸ್ವಾಗತಿಸಿದರು, ನ್ಯಾಯವಾದಿ ಮೇರಿ ಸ್ರೇಷ್ಠ ಕಾರ್ಯಕ್ರಮ ನಿರೂಪಿಸಿ, ವಕೀಲರ ಸಂಘದ ಕಾರ್ಯದರ್ಶಿ ರೆನೋಲ್ಡ್ ಪ್ರವೀಣ್ ಕುಮಾರ್ ವಂದಿಸಿದರು.
Kshetra Samachara
19/02/2022 02:43 pm