ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಡುಬಿದ್ರಿ ಬ್ಲೂಫ್ಲ್ಯಾಗ್ ಬೀಚ್ ನಲ್ಲಿ ಅಕ್ರಮ : ಜಿಲ್ಲಾಧಿಕಾರಿಗೆ ದೂರು!

ಪಡುಬಿದ್ರೆ :ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಬ್ಲೂಫ್ಲ್ಯಾಗ್ ಬೀಚ್ನ ಉದ್ಯೋಗಿಗಳು ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಬ್ಲೂಫ್ಲ್ಯಾಗ್ ಬೀಚ್ ನಿರ್ವಹಣೆಯಲ್ಲಿ ಅಕ್ರಮಗಳು ನಡೆಯುತ್ತಿರುವ ಬಗ್ಗೆ ದೂರು ಸಲ್ಲಿಸಿದ್ದಾರೆ.ಇಲ್ಲಿ ಬೋಟಿಂಗ್ಗೆ ನಕಲಿ ರಶೀದಿಗಳನ್ನು ಮುದ್ರಿಸಿ ಹಣ ವಸೂಲು ಮಾಡಲಾಗುತ್ತಿದೆ. ವಸೂ ಲಾದ ಹಣವು ಪ್ರವಾಸೋದ್ಯಮ ಇಲಾಖೆಯ ಖಾತೆಗೆ ಜಮೆಯಾಗದೆ ಖಾಸಗಿ ವ್ಯಕ್ತಿಯ ಖಾತೆಗೆ ಜಮೆಯಾಗುತ್ತಿದೆ. ಈ ಕುರಿತು ಈ ಹಿಂದೆ ಜಿಲ್ಲಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಿಗೆ ದೂರು ನೀಡಿದ್ದರೂ, ಪ್ರಯೋಜನವಾಗಿಲ್ಲ ಎಂದು ಅಲ್ಲಿನ ಗುತ್ತಿಗೆ ಉದ್ಯೋಗಿಗಳು ದೂರಿದ್ದಾರೆ.

ನಾವು 31 ಮಂದಿ ಉದ್ಯೋಗಿಗಳಿದ್ದು ನ್ಯಾಯ ದೊರಕಬೇಕು.ಅಕ್ರಮಗಳ ಬಗ್ಗೆ ಪ್ರಶ್ನಿಸಿದ್ದಕ್ಕೆ ಸೂಪರ್ವೈಸರ್ಗಳಿಬ್ಬರು ನಮ್ಮಲ್ಲಿ ಜೀವಭಯ ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Edited By : Somashekar
Kshetra Samachara

Kshetra Samachara

07/10/2022 05:25 pm

Cinque Terre

7.17 K

Cinque Terre

0

ಸಂಬಂಧಿತ ಸುದ್ದಿ