ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕದ್ರಿ ಪಾರ್ಕ್ ರಸ್ತೆ ವಿಳಂಬ ಕಾಮಗಾರಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ಮಂಗಳೂರಿನ ಕದ್ರಿ ಪಾರ್ಕ್ ರಸ್ತೆ ಕಾಮಗಾರಿ ವಿಳಂಬ ಖಂಡಿಸಿ ಮಾಜಿ ಶಾಸಕ ಜೆ.ಆರ್. ಲೋಬೊ ನೇತೃತ್ವದಲ್ಲಿ ನಗರದ ಸರ್ಕ್ಯೂಟ್ ಹೌಸ್ ಬಳಿ ಪ್ರತಿಭಟನೆ ನಡೆಯಿತು. ಸ್ಮಾರ್ಟ್ ಸಿಟಿ ಯೋಜನೆ ಹೆಸರಿನಲ್ಲಿ ಹಣ ದುರುಪಯೋಗ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಈ ವೇಳೆ ಮಾತನಾಡಿದ ಮಾಜಿ ಶಾಸಕ ಜೆ.ಆರ್.ಲೋಬೊ, ಕದ್ರಿ ಪಾರ್ಕ್ ರಸ್ತೆ ಕಾಮಗಾರಿ ಸಂಪೂರ್ಣವಾಗಿ ವಿಫಲವಾಗಿದೆ. ನಗರ ಪ್ರದೇಶದಲ್ಲಿ ಸ್ಮಾರ್ಟ್ ಸಿಟಿ ಹಣ ಪೋಲು ಮಾಡಲಾಗುತ್ತಿದೆ. ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನ ವಿಚಾರದಲ್ಲಿ ಬಿಜೆಪಿ ಸರ್ಕಾರ ಹಾಗೂ ಸ್ಥಳೀಯ ಶಾಸಕರು ವಿಫಲವಾಗಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆ ವೇಳೆ ಕಾಂಗ್ರೆಸ್ ಮುಖಂಡರಾದ ಟಿ.ಕೆ.ಸುಧೀರ್, ಸಲೀಂ, ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

Edited By : Nagesh Gaonkar
Kshetra Samachara

Kshetra Samachara

21/09/2020 01:06 pm

Cinque Terre

14.61 K

Cinque Terre

0