ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ : ದಶಕದಿಂದ ಅರ್ಧಂಬರ್ಧ ಕಟ್ಟಡ ಕಾಮಗಾರಿ, ನಿಂತ ಮಳೆನೀರಿನಿಂದ ರೋಗ ಭೀತಿ

ಮುಲ್ಕಿ: ಮುಲ್ಕಿ ನಪಂ ವ್ಯಾಪ್ತಿಯ ಕೆನರಾ ಬ್ಯಾಂಕ್ ರಸ್ತೆ ಹೋಟೆಲ್ ಎದುರುಗಡೆ ಕಳೆದ ಹತ್ತು ವರ್ಷಗಳಿಂದ ಬಹುಮಹಡಿ ಕಟ್ಟಡದ ಕಾಮಗಾರಿ ಅರ್ಧದಲ್ಲಿ ನಿಂತಿದ್ದು, ಮಳೆಗಾಲದಲ್ಲಿ ಕಟ್ಟಡದ ಒಳಗಡೆ ನೀರು ನಿಂತು ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ರಝಾಕ್ ಆರೋಪಿಸಿದ್ದಾರೆ.

ಪುತ್ತೂರು ಮೂಲದ ರೈ ಬಿಲ್ಡರ್ಸ್ ನವರ ಬಹುಮಹಡಿ ಕಟ್ಟಡ ಕಾಮಗಾರಿ ಅವೈಜ್ಞಾನಿಕ ರೀತಿ ಕಳೆದ ಕೆಲ ವರ್ಷಗಳ ಹಿಂದೆ ಕುಂಟುತ್ತಾ ಸಾಗುತ್ತಿದ್ದು, ಪ್ರತಿ ಮಳೆಗಾಲದಲ್ಲಿ ನೀರು ನಿಂತು ರೋಗಗಳಿಗೆ ಆಹ್ವಾನ ನೀಡುತ್ತಿದೆ. ಈ ಬಗ್ಗೆ ಅನೇಕ ಬಾರಿ ಮುಲ್ಕಿ ನಪಂಗೆ ತಿಳಿಸಿದ್ದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಬ್ದುಲ್ ರಜಾಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಹು ಮಹಡಿ ಕಟ್ಟಡದ ಒಳಭಾಗದಲ್ಲಿ ಮಳೆನೀರು ನಿಂತು, ಸೊಳ್ಳೆ ಉತ್ಪತ್ತಿ ಕೇಂದ್ರವಾಗಿ ಮಾರ್ಪಟ್ಟು ಮಲೇರಿಯಾ, ಡೆಂಗೆ ಹರಡಲು ಕಾರಣವಾಗುತ್ತಿದೆ. ಕಟ್ಟಡ ಹಿಂಭಾಗ ವಿಷಜಂತು ಕೂಡ ಕಾಣಸಿಗುತ್ತಿದೆ. ಕೂಡಲೇ ಮುಲ್ಕಿ ನಪಂ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಲಾಗುವುದು ಎಂದರು.

ಅರ್ಧಂಬರ್ಧ ಕಟ್ಟಡ ಕಾಮಗಾರಿ ಬಗ್ಗೆ ಮುಲ್ಕಿ ನಪಂ ಮುಖ್ಯಾಧಿಕಾರಿ ಚಂದ್ರ ಪೂಜಾರಿ ಮಾತನಾಡಿ, ಸ್ಥಳೀಯರಿಂದ ಅವ್ಯವಸ್ಥೆ ಬಗ್ಗೆ ದೂರುಗಳು ಬಂದಿದ್ದು, ಈಗಾಗಲೇ ಕಟ್ಟಡ ಕಾಮಗಾರಿಯ ಗುತ್ತಿಗೆದಾರರಿಗೆ ಎಚ್ಚರಿಕೆ ನೋಟಿಸ್ ನೀಡಲಾಗಿದ್ದು ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದೆ, ಮುಂದೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

27/09/2020 08:48 pm

Cinque Terre

23.25 K

Cinque Terre

1

ಸಂಬಂಧಿತ ಸುದ್ದಿ