ಮೂಡಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಕಾಲೇಜ್ ಆವರಣಗೋಡೆ ಕುಸಿದು ಬಿದ್ದು ಮೂರು ಕಾರುಗಳಿಗೆ ಹಾನಿಯಾದ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ.
ಮೈಟ್ ಇಂಜಿನಿಯರಿಂಗ್ ಕಾಲೇಜಿನ ಆವರಣಗೋಡೆ ಕುಸಿದಿದ್ದು ವಿದ್ಯಾರ್ಥಿಗಳು ನಿಲ್ಲಿಸಿದ್ದ ಕಾರುಗಳ ಮೇಲೆ ಕಲ್ಲು, ಮಣ್ಣು ಬಿದ್ದು ಸಂಪೂರ್ಣ ಜಖಂಗೊಂಡಿದೆ. ಸ್ಥಳದಲ್ಲಿ ವಿದ್ಯಾರ್ಥಿಗಳು ಇಲ್ಲದೇ ಇರುವುದರಿಂದ ದೊಡ್ಡ ಅನಾಹುತ ತಪ್ಪಿದೆ ಎನ್ನಲಾಗಿದೆ. ಸ್ಥಳ ಒತ್ತುವರಿಯಿಂದ ನೀರು ಹರಿಯುದಕ್ಕೆ ತಡೆ ನೀಡಿದ್ದು, ಆವರಣಗೋಡೆ ಕುಸಿಲು ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡಾ ಮಳೆ ಮುಂದುವರಿದೆ. ಗುರುಪುರ ಅಣೆಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ರಸ್ತೆ ಬದಿಯ ನಿನ್ನೆಯಿಂದ ಸುರಿದ ಭಾರಿ ಮಳೆಗೆ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.
PublicNext
06/07/2022 07:53 am