ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.)ನಾವುಂದ ಇದರ ವತಿಯಿಂದ ಗಿಡ ವಿತರಣೆ, ಹಾಗೂ ಕೃಷಿ ಮಾಹಿತಿ ಮತ್ತು ಪ್ರಗತಿಪರ ಹಿರಿಯ ಕೃಷಿಕರಿಗೆ ಸನ್ಮಾನ ಹಾಗೂ ನವೋದಯ ಸಂಘದ ಮಹಿಳೆಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ಹೇರೂರು ಶಾಖಾ ವಠಾರದಲ್ಲಿ ನಡೆಯಿತು.
ಕುಂದಾಪುರ ವಿಭಾಗದ ಸಹಾಯಕ ಉಪ ಸಂರಕ್ಷಣಾಧಿಕಾರಿ ಕ್ಲಿಪರ್ಡ್ ಲೋಬೊ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ರಾಜು ಪೂಜಾರಿ ವಹಿಸಿದ್ರು. ಕೃಷಿಯಲ್ಲಿ ಸಾಧನೆ ಮಾಡಿದ ಹಿರಿಯ ಕೃಷಿಯ ಸಾಧಕರಿಗೆ ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಪಿ.ಸಂಸ್ಥೆಯ ನಿರ್ದೇಶಕರು, ಸಿಬ್ಬಂದಿ ವರ್ಗ, ಗ್ರಾಮ ಪಂಚಾಯತ್ ಅಧ್ಯಕ್ಷ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಎಸ್.ರಾಜು ಪೂಜಾರಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಉಪಾಧ್ಯಕ್ಷ ಎಮ್.ಚಂದ್ರಶೀಲ ಶೆಟ್ಟಿ ವಂದಿಸಿದರು.
Kshetra Samachara
09/08/2022 07:55 pm