ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪಾರಂಪಳ್ಳಿಯಲ್ಲಿ ಹರಿಯುವ ಉಪ್ಪು ಮಿಶ್ರಿತ ನೀರಿನ ಹೊಳೆಯಲ್ಲಿ ಭಾರಿ ಪ್ರಮಾಣದಲ್ಲಿ ಮೀನುಗಳು ಸತ್ತು ತೇಲುತ್ತಿವೆ. ತೋಡ್ಕಟ್ಟು ಬಳಿ ಸೇತುವೆ ನಿರ್ಮಾಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹೊಳೆಗೆ ಮಣ್ಣು ಹಾಕಿ ಬಂದ್ ಮಾಡಲಾಗಿತ್ತು.
ಮಳೆಗಾಲದ ಮುನ್ಸೂಚನೆ ಹಿನ್ನೆಲೆಯಲ್ಲಿ ಹೊಳೆಗೆ ಅಡ್ಡಲಾಗಿ ಹಾಕಿದ ಮಣ್ಣು ಏಕಾಏಕಿ ತೆರವುಗೊಳಿಸಿದ್ದರಿಂದ ಮೀನುಗಳ ಸಾವು ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಪಾರಂಪಳ್ಳಿ, ಕೋಡಿ ಆಸುಪಾಸು ಹೊಳೆ ಸಮುದ್ರ ಸೇರುವ ಸ್ಥಳದಲ್ಲಿ ಮೀನುಗಳು ಸತ್ತು ಬದಿಗೆ ಸೇರಿ ದುರ್ವಾಸನೆ ಬೀರುತ್ತಿದೆ.
ಈ ಬಗ್ಗೆ ಸ್ಥಳೀಯರು ಸ್ಥಳೀಯಾಡಳಿತದ ಮುಖ್ಯಾಧಿಕಾರಿಗಳನ್ನು ಸಂಪರ್ಕಿಸಿದ್ದು, ಈವರೆಗೆ ಯಾವುದೇ ರೀತಿಯ ಕ್ರಮಕ್ಕೆ ಮುಂದಾಗಿಲ್ಲ ಎನ್ನಲಾಗಿದೆ. ಸ್ಥಳೀಯಾಡಳಿತ ತಕ್ಷಣ ಕ್ರಮ ಕೈಗೊಳ್ಳುವ ಮೂಲಕ ಇನ್ನಷ್ಟು ಮೀನುಗಳ ಸಾವನ್ನು ತಪ್ಪಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
Kshetra Samachara
14/06/2022 01:03 pm