ಬೈಂದೂರು: ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಂದಾಪುರ ಮತ್ತು ಬೈಂದೂರು ತಾಲೂಕುಗಳ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಳೆ ಹಿನ್ನೆಲೆಯಲ್ಲಿ ಈ ಎರಡೂ ತಾಲೂಕುಗಳ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಶಿರೂರಿನಲ್ಲಿ ಭಾರೀ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿದ್ದು ಜನರು ಸಾಕಷ್ಟು ಪರದಾಡಬೇಕಾಯಿತು.ಸತತ ಮಳೆಗೆ ಶಿರೂರಿನ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು ಬೈಂದೂರು, ಕೊಲ್ಲೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗುವ ಸಾಧ್ಯತೆ ಇದೆ.
ಮುಂದಿನ ಎರಡು ದಿನ ಕರಾವಳಿಯಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.
Kshetra Samachara
02/08/2022 03:48 pm