ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರ್ಷಧಾರೆ ಮುಂದುವರಿದಿದೆ. ಮಂಗಳೂರು ಹೊರವಲಯದ ಉಚ್ಚಿಲ, ಸೋಮೇಶ್ವರ ಹಾಗೂ ತಲಪಾಡಿ ಪ್ರದೇಶದಲ್ಲಿ ಸುರಿದ ಭಾರೀ ಮಳೆಗೆ ದೊಡ್ಡ ಅವಾಂತರವೇ ಸೃಷ್ಟಿಯಾಗಿದೆ.
ಉಚ್ಚಿಲಗುಡ್ಡೆ ಶಾಲೆಗೆ ಮಳೆನೀರು ನುಗ್ಗಿದೆ. ಹಲವು ಕಡೆಗಳಲ್ಲಿ ಮನೆಗಳಿಗೂ ನೀರು ನುಗ್ಗಿ ಬಿಟ್ಟಿದೆ. ಸ್ಥಳಾಂತರ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳೀಯ ಶಾಸಕ ಯು.ಟಿ. ಖಾದರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ನೆರೆ ಬಾಧಿತ ಪ್ರದೇಶಕ್ಕೆ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದ ಶಾಸಕರು, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
Kshetra Samachara
05/07/2022 04:30 pm