ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಮರವಂತೆ ಬೀಚ್ ಸುರಕ್ಷತೆ-ಸುಂದರೀಕರಣ: ಎನ್‌ಹೆಚ್‌ಎಐ ಅಧಿಕಾರಿಗಳಿಂದ ಪರಿಶೀಲನೆ

ಕುಂದಾಪುರ: ಬೈಂದೂರು ವಿಧಾನಸಭಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ -66 ರ ತಲ್ಲೂರು, ಹೆಮ್ಮಾಡಿ, ತ್ರಾಸಿ, ಯಡ್ತರೆ ಬೈಪಾಸ್, ಬೈಂದೂರು ತಾಲೂಕು ಕಛೇರಿ ಬಳಿ ಅಂಡರ್ ಪಾಸ್ ನಿರ್ಮಾಣ, ಮರವಂತೆ ಬೀಚ್ ಬಳಿ ರಸ್ತೆ ಸುರಕ್ಷತೆ ಹಾಗೂ ಸುಂದರೀಕರಣಕ್ಕೆ ಸಂಬಂಧಿಸಿ ದೆಹಲಿಯಿಂದ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಚೀಫ್ ಜನರಲ್ ಮ್ಯಾನೇಜರ್ ವಿಶಾಲ್ ಗುಪ್ತಾ ಅವರು ಬೈಂದೂರು ಭಾಗದಲ್ಲಿ ಸ್ಥಳ ಪರಿಶೀಲನೆ ನಡೆಸಿ ವಿವರ ಪಡೆದುಕೊಂಡರು. ಅವರೊಂದಿಗೆ ಸ್ಥಳೀಯರಾದ ಉದ್ಯಮಿ ವೆಂಕಟೇಶ್ ಕಿಣಿ, ಮಂಗಳೂರು ವಿಭಾಗದ ಪಿ.ಡಿ ಲಿಂಗೇಗೌಡ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕರಿಗಳು ಉಪಸ್ಥಿತರಿದ್ದರು.

ಈ ಬಗ್ಗೆ ಶಿವಮೊಗ್ಗ-ಬೈಂದೂರು ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಕೇಂದ್ರ ಸಚಿವರಲ್ಲಿ ಮಾಡಿದ್ದ ಮನವಿಗೆ ಸ್ಪಂದಿಸಿ ಅಧಿಕಾರಿಗಳು ಸಮೀಕ್ಷೆ ನಡೆಸಿದ್ದಾರೆ.

Edited By :
Kshetra Samachara

Kshetra Samachara

05/09/2022 11:03 am

Cinque Terre

9.22 K

Cinque Terre

0

ಸಂಬಂಧಿತ ಸುದ್ದಿ