ಭಾರಿ ಮಳೆಯಿಂದಾಗಿ ಕುಂದಾಪುರ ತಾಲೂಕು ವ್ಯಾಪ್ತಿಯ ಹೈಕಾಡಿ ಬಳಿ ಭೂ ಕುಸಿತ ಉಂಟಾಗಿದೆ. ಹಾಲಾಡಿಗೋಳಿಯಂಗಡಿ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿಯ ಭಾರಿ ಮಳೆಯಿಂದಾಗಿ ಹೆದ್ದಾರಿ ಪಕ್ಕದ ಭೂ ಕುಸಿತವಾಗಿ ರಾಜ್ಯ ಹೆದ್ದಾರಿ ಮೇಲೆ ಗುಡ್ಡದ ಮಣ್ಣು ಜರಿದು ಬಿದ್ದಿದೆ.ಸದ್ಯ ಪಿಡಬ್ಲ್ಯೂಡಿ ಇಲಾಖೆಯವರು ಮಣ್ಣು ತೆರವು ಮಾಡುತ್ತಿದ್ದಾರೆ.
ಇನ್ನು ಬೇಳೂರಿನಲ್ಲಿ ಕಿಂಡಿ ಅಣೆಕಟ್ಟು ತುಂಬಿ ಹರಿದ ಪರಿಣಾಮ ಸ್ಥಳೀಯ ಕೃಷಿ ಭೂಮಿ, ತಗ್ಗು ಪ್ರದೇಶಗಳಿಗೆ ನೆರೆ ನೀರು ನುಗ್ಗಿದೆ. ಕುಂದಾಪುರ ತಾಲೂಕು ವ್ಯಾಪ್ತಿಯ ತೆಕ್ಕಟ್ಟೆ ಸಮೀಪದ ಬೇಳೂರು ಎಂಬಲ್ಲಿ ಈ ಘಟನೆ ನಡೆದಿದೆ. ಮಳೆ, ನೆರೆಯಿಂದಾಗಿ ಮೊದಲೇ ಕಂಗೆಟ್ಟಿದ್ದ ಗ್ರಾಮಸ್ಥರು ನೆರೆಹಾವಳಿಯಿಂದ ಕಂಗಾಲಾಗಿದ್ದಾರೆ.
Kshetra Samachara
08/07/2022 07:28 pm