ಮುಲ್ಕಿ: ಹಳೆಯಂಗಡಿಯ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತೋಕೂರು-ಲೈಟ್ ಹೌಸ್ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.
'ಸ್ವಚ್ಛತೆ ನಮ್ಮೆಲ್ಲರ ಮೊದಲ ಆದ್ಯತೆಯಾಗಲಿ. ಸ್ವಚ್ಛತೆಯಿಂದ ಗ್ರಾಮದ ಸುತ್ತಮುತ್ತ ಉತ್ತಮ ವಾತಾವರಣ ನಿರ್ಮಾಣ ಮಾಡಲು ಸಾಧ್ಯ' ಎಂದು ಸಂಸ್ಥೆಯ ಗೌರವಾದ್ಯಕ್ಷ ಮೋಹನ್ ದಾಸ್ ಹೇಳಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಸಂತೋಷ್ ದೇವಾಡಿಗ, ಉಪಾಧ್ಯಕ್ಷ ದೀಪಕ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಜಗದೀಶ್ ಕುಲಾಲ್, ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ, ಪದಾಧಿಕಾರಿಗಳಾದ ಪ್ರಶಾಂತ್ ಕುಮಾರ್ ಬೇಕಲ್, ಸುನಿಲ್ ದೇವಾಡಿಗ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Kshetra Samachara
21/09/2021 07:54 am