ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ 3.50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ತಡೆಗೋಡೆ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸವನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕ ವರ್ಗದವರ ಉಪಸ್ಥಿತಿಯಲ್ಲಿ ಮುಲ್ಕಿ-ಮೂಡುಬಿದಿರೆ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರು ನೆರವೇರಿಸಿದರು.
ಈ ಸಂದರ್ಭ ಕಟೀಲು ದೇವಸ್ಥಾನದ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ, ಬಿಜೆಪಿ ನಾಯಕರಾದ ಈಶ್ವರ ಕಟೀಲು, ಕಸ್ತೂರಿ ಪಂಜ, ಸುನಿಲ್ ಆಳ್ವ, ಜನಾರ್ದನ ಕಿಲೆಂಜೂರು, ಕೇಶವ ಕರ್ಕೇರ, ದೇವಸ್ಥಾನದ ಮ್ಯಾನೇಜರ್ ತಾರಾನಾಥ್, ವೇದವ್ಯಾಸ ಉಡುಪ ಕೊಡೆತ್ತೂರು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
24/01/2022 12:02 pm