ಬೈಂದೂರು: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಸೂರಕುಂದ ಸಮೀಪದ ಕಲ್ಮಕ್ಕಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಪರಿಣಾಮ ನದಿಗೆ ನಿರ್ಮಿಸಿದ್ದ ಸೇತುವೆ ಕುಸಿದು ಬಿದ್ದಿದೆ. ಇದರಿಂದಾಗಿ ಸ್ಥಳೀಯರಿಗೆ ಓಡಾಡಲು ರಸ್ತೆ ಇಲ್ಲದಂತಾಗಿದ್ದು, ಜನ ಜೀವನ ತುಂಬಾ ದುಸ್ತರವಾಗಿದೆ.
ಶಾಸಕ ಸುಕುಮಾರ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿ ಆತಂಕದಲ್ಲಿರುವ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದರು. ಬಳಿಕ ಜನರಿಗೆ ಧೈರ್ಯ ತುಂಬಿ ತಕ್ಷಣ ಪಟ್ಟಣ ಪಂಚಾಯತ್ ಇಂಜಿನಿಯರ್ ಜೊತೆಗೆ ಮಾತನಾಡಿ ತುರ್ತು ಸಂಪರ್ಕ ವ್ಯವಸ್ಥೆ ಕೈಗೊಳ್ಳುವಂತೆ ಆದೇಶ ನೀಡಿದರು.
ಈ ಸಂದರ್ಭದಲ್ಲಿ ಶಾಸಕರ ಜೊತೆಯಲ್ಲಿ ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯ ಶಂಕರ್ ಪೂಜಾರಿ, ಸುಕುಮಾರ ಬಿಜೆಪಿ ಅಲ್ಪಸಂಖ್ಯಾತ ಮುಖಂಡ ಜೈಸನ್ ಮದ್ದೋಡಿ, ಸಮಾಜ ಸೇವಕ ಸುಬ್ರಮಣ್ಯ ಬಿಜೂರ್ ರಾಜೇಶ್ ಬಡಾಕೆರೆ ಇದ್ದರು.
Kshetra Samachara
11/07/2022 05:48 pm