ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: "ನಿರಂತರ ಹೋರಾಟದಿಂದ 450 ಎಕ್ರೆ ಭೂಮಿ ಮತ್ತೆ ಕೊರಗ ಸಮುದಾಯಕ್ಕೆ" ; ಜಿಲ್ಲಾಧಿಕಾರಿ ಶ್ಲಾಘನೆ

ಕುಂದಾಪುರ: ನಿರಂತರ ಹೋರಾಟದ ಫಲವಾಗಿ ಉಡುಪಿ ಜಿಲ್ಲೆಯಲ್ಲಿ 450 ಎಕ್ರೆಯಷ್ಟು ಭೂಮಿಯನ್ನು ಕೊರಗ ಸಮುದಾಯ ಮತ್ತೆ ಪಡೆದುಕೊಂಡಿರುವುದು ನಿಜಕ್ಕೂ ಶ್ಲಾಘನೀಯ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಹೇಳಿದರು.

ಅವರು ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ, ಕರ್ನಾಟಕ- ಕೇರಳ ನೇತೃತ್ವದಲ್ಲಿ ಕುಂದಾಪುರದ ಅಂಬೇಡ್ಕರ್ ಸಭಾಭವನದಲ್ಲಿ ನಡೆದ 14ನೇ ಭೂಮಿ ಹಬ್ಬವನ್ನು ಡೋಲು ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಕೊರಗ ಸಮುದಾಯದಲ್ಲಿ ಹಲವಾರು ಮಂದಿ ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿಯೂ ಈ ಸಮುದಾಯದ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಇನ್ನಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾಲೊನಿಗಳಲ್ಲಿ ಟ್ಯೂಶನ್ ಸೆಂಟರ್‌ ಆರಂಭಿಸಲಾಗಿದೆ ಎಂದರು.

ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಅಧ್ಯಕ್ಷೆ ಅಮ್ಮಣಿ ಕೊರಗ ಅಬ್ಲಿಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಧ್ವಜಾರೋಹಣ ನೆರವೇರಿಸಿದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೊ. ಪ್ರಸನ್ನ ತೆಂಗಿನ ಸಸಿಗೆ ನೀರೆರೆದು ಚಾಲನೆ ನೀಡಿದರು. ಸಮಾಜದ ಹಿರಿಯ ಮಹಿಳೆ ಗೌರಿ ಕೊರಗ ಹಬ್ಬದ ಜ್ಯೋತಿ ಬೆಳಗಿಸಿದರು.

ಮಂಗಳೂರು ವಿವಿ ಅಸಿಸ್ಟೆಂಟ್ ಪ್ರೊಫೆಸರ್ ಡಾ.ಸಬಿತಾ ಗುಂಡ್ಮಿ, ಐಟಿಡಿಪಿ ಯೋಜನಾ ಸಮನ್ವಯಾಧಿಕಾರಿ ದೂದ್ ಫೀರ್, ಕುಂದಾಪುರದ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ, ಸಮಾಜ ಕಲ್ಯಾಣ ಅಧಿಕಾರಿ ರಾಘವೇಂದ್ರ ವರ್ಣೇಕರ್, ಕೊರಗ ಅಭಿವೃದ್ಧಿ ಸಂಘ ಕುಂದಾಪುರ ವಲಯ ಅಧ್ಯಕ್ಷ ಶೇಖರ ಕೊರಗ, ಜಿಲ್ಲಾ ಸಮಿತಿ ಮಾಜಿ ಅಧ್ಯಕ್ಷ ದೋಗ್ರ ಕೊರಗ, ಶೋಭಾ ಬಂಟ್ವಾಳ, ಗೋಪಾಲ ಕಾಸರಗೋಡು, ಸುರೇಶ ಪುತ್ತೂರು, ಭೂಮಿ ಹಬ್ಬದ ಉಸ್ತುವಾರಿ ಸಮಿತಿ ಅಧ್ಯಕ್ಷ, ಪುರಸಭಾ ಸದಸ್ಯ ಪ್ರಭಾಕರ ವಿ. ಉಪಸ್ಥಿತರಿದ್ದರು.

ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಪ್ರಧಾನ ಕಾರ್ಯದರ್ಶಿ ಕೆ.ಪುತ್ರನ್ ಹೆಬ್ರಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೊರಗ ಅಭಿವೃದ್ಧಿ ಸಂಘ ಕೊಕ್ಕರ್ಣೆ ಕಾರ್ಯದರ್ಶಿ ಸುಚಿತ್ರಾ ವಂದಿಸಿದರು. ಸುನಂದಾ ಮತ್ತು ತಂಡ ಧ್ಯೇಯಗೀತೆ ಹಾಡಿದರು. ಸುರೇಂದ್ರ ಕಳ್ತೂರು, ವಿಮಲಾ ಕಳ್ತೂರು ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮಕ್ಕೂ ಮೊದಲು ಕುಂದಾಪುರ ನಗರದಲ್ಲಿ ಜಾಥಾ ನಡೆಯಿತು.

Edited By :
Kshetra Samachara

Kshetra Samachara

18/08/2022 10:30 pm

Cinque Terre

4.82 K

Cinque Terre

0

ಸಂಬಂಧಿತ ಸುದ್ದಿ