ಉಡುಪಿ: ರಾಜ್ಯ ರೈತ ಸಂಘಟನೆಗಳು ಕರೆ ಕೊಟ್ಟ ಕರ್ನಾಟಕ ಬಂದ್ ಗೆ ಉಡುಪಿ ಜಿಲ್ಲೆಯ 14 ಸಂಘಟನೆಗಳು ಸಾಥ್ ನೀಡಿವೆ.
ರೈತರ ಪರವಾಗಿ ವಿವಿಧ ಸಂಘಟನೆಗಳ 500ಕ್ಕೂ ಮಿಕ್ಕಿ ಕಾರ್ಯಕರ್ತರು ರಸ್ತೆಗಿಳಿಯಲಿದ್ದಾರೆ ಎಂದು ಸಿಪಿಐಎಂ ಮುಖಂಡ ಬಾಲಕೃಷ್ಣ ಶೆಟ್ಟಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾರ್ಪೊರೇಟ್ ಕಂಪೆನಿಗಳ ಪರವಾದ
ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಅಗತ್ಯ ವಸ್ತು ಕಾಯ್ದೆ ತಿದ್ದುಪಡಿ,ವಿದ್ಯುತ್ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ರೈತರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲೆಯ ಕಾಂಗ್ರೆಸ್ ಕಿಸಾನ್ ಘಟಕ, ಕರ್ನಾಟಕ ಪ್ರಾಂತ ರೈತ ಸಂಘ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಜನತಾದಳ, ದಲಿತ ಸಂಘರ್ಷ ಸಮಿತಿ, ಭಾರತ ಕಮ್ಯುನಿಷ್ಟ್ ಪಕ್ಷ, ಸಹಬಾಳ್ವೆ, ವೆಲ್ಫೇರ್ ಪಾರ್ಟಿ, ಮುಸ್ಲಿಂ ಒಕ್ಕೂಟ, ಕ್ರಿಶ್ಚಿಯನ್ ಒಕ್ಕೂಟ, ಟ್ರೆಡ್ ಯೂನಿಯನ್, ಅಂಬೇಡ್ಕರ್ ಯುವಸೇನೆ ಸೇರಿ ಒಟ್ಟು 14 ಸಂಘಟನೆಗಳು ಸಾಥ್ ನೀಡುತ್ತಿವೆ.
ಜಿಲ್ಲೆಯ ಕಾರ್ಮಿಕರು, ವ್ಯಾಪಾರಿಗಳು, ಬಸ್ ಮಾಲಕರು, ನೌಕರರು ಬಂದ್ ಬೆಂಬಲಿಸುವಂತೆ ಮನವೊಲಿಸುತ್ತೇವೆ. ಈ ಬಂದ್ ಮೂಲಕ ರೈತರ ಜೊತೆ ನಿಂತು ಎಚ್ಚರಿಕೆ ನೀಡಬೇಕಿದೆ ಎಂದು ಬಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ.
Kshetra Samachara
26/09/2020 05:40 pm