ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಅಸಂಘಟಿತ ಮೀನುಗಾರ ಮಹಿಳೆಯರಿಗೆ ಮೀನು ಮಾರಲು ಸೂಕ್ತ ಸ್ಥಳಾವಕಾಶ ಒದಗಿಸುವಂತೆ ಮನವಿ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹಲವಾರು ಮೀನು ಮಾರುಕಟ್ಟೆ ಇದ್ದರೂ ಕೂಡ ಕೆಲವೊಂದು ಅಸಂಘಟಿತ ಮೀನುಗಾರ ಮಹಿಳೆಯರು ಮಾರುಕಟ್ಟೆಯಲ್ಲಿ ಸೂಕ್ತ ಸ್ಥಳಾವಕಾಶ ಸಿಗದೆ ಕೆಲವೊಂದು ಕಡೆಯಲ್ಲಿ ರಸ್ತೆಯಲ್ಲಿಯೇ ಮೀನು ಮಾರಾಟ ಮಾಡುತ್ತಿದ್ದಾರೆ. ಅಂತಹ ಮಹಿಳೆಯರಿಗೆ ಮೀನು ಮಾರಾಟ ಮಾಡದಂತೆ ನಗರಸಭೆಯಿಂದ ಈಗಾಗಲೇ ಸೂಚನೆ ನೀಡಲಾಗಿದೆ.

ಮೀನು ಮಾರಾಟ ಮಾಡುವುದು ಪ್ರತಿಯೊಬ್ಬ ಮೀನುಗಾರ ಮಹಿಳೆಯರ ಹಕ್ಕಾಗಿದ್ದು ಅವರಿಗೆ ಮಾರುಕಟ್ಟೆಯಲ್ಲಿ ಸೂಕ್ತ ಸ್ಥಳಾವಕಾಶ ಸಿಗದೆ ರಸ್ತೆ ಬದಿಯಲ್ಲಿ ಒಬ್ಬೊಬ್ಬರಾಗಿ ಮಾರಾಟ ಮಾಡುವ ಪರಿಸ್ಥಿತಿ ಉಂಟಾಗಿದೆ. ಲಾಕ್ ಡೌನ್ ಸಮಯದಲ್ಲಿ ಮೀನುಗಾರ ಮಹಿಳೆಯರು ಸೂಕ್ತ ದಿನಗೂಲಿ ಲಭಿಸದೆ ಪರದಾಡಿದ್ದಾರೆ. ಈಗಷ್ಟೇ ಮೀನು ಹಿಡಿದು ಅದನ್ನು ಅವರಿಗೆ ಸೂಕ್ತ ವ್ಯಾಪಾರ ಸಿಗುವ ಸ್ಥಳದಲ್ಲಿ ಮಾರಾಟ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ.

ಒಂದು ವೇಳೆ ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುವುದಾದರೆ ಅಂತಹ ಅಸಂಘಟಿತ ಮೀನುಗಾರ ಮಹಿಳೆಯರಿಗೆ ಸರ್ಕಾರ ಮತ್ತು ನಗರಸಭೆ ಸೂಕ್ತ ವ್ಯವಸ್ಥೆ ಮಾಡಬೇಕಾಗಿ ಈ ಮೂಲಕ ಉಡುಪಿ ನಗರಸಭೆಯ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸುವ ಸಂದರ್ಭ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ,ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಯತೀಶ್ ಕರ್ಕೇರ,ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಜನರಲ್ ಸೆಕ್ರೆಟರಿ ಅಬ್ದುಲ್ ರೆಹಮಾನ್ ಮತ್ತು ಮಾಧವ ಬನ್ನಂಜೆ ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

24/09/2020 07:58 pm

Cinque Terre

14.05 K

Cinque Terre

0

ಸಂಬಂಧಿತ ಸುದ್ದಿ