ಬೈಂದೂರು: ರಾಷ್ಟ್ರೀಯ ಹೆದ್ದಾರಿ 66ರ ಆರಾಟೆಯ ಹೊಸ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು , ವಾಹನ ಸವಾರರು ಆತಂಕಗೊಂಡಿದ್ದಾರೆ.
ಬೈಂದೂರಿನಿಂದ ಕುಂದಾಪುರ ಕಡೆಗೆ ಸಂಚರಿಸುವ ಸೇತುವೆಯಲ್ಲಿ ಬಿರುಕು ಕಾಣಿಸಿದ್ದು,ಇದು ಇತ್ತೀಚೆಗೆ ಹೊಸದಾಗಿ ನಿರ್ಮಾಣಗೊಂಡಿದ್ದ ಸೇತುವೆ ಎಂಬುದು ಗಮನಾರ್ಹ.
ಹೊಸ ಸೇತುವೆ ನಿರ್ಮಾಣದ ಬಳಿಕ ಏಕಮುಖ ಸಂಚಾರ ಜಾರಿಯಲ್ಲಿತ್ತು, ಕುಂದಾಪುರದಿಂದ ತೆರಳುವವರಿಗೆ ಹೊಸ ಸೇತುವೆ, ಬರುವವರಿಗೆ ಹಳೆ ಸೇತುವೆ ಸಂಚಾರಕ್ಕೆ ಮುಕ್ತವಾಗಿತ್ತು.
ಹೊಸ ಸೇತುವೆಯಲ್ಲಿ ಬಿರುಕು ಕಂಡುಬಂದ ಹಿನ್ನೆಲೆಯಲ್ಲಿ ಹೊಸ ಸೇತುವೆಯಲ್ಲಿ ಸಂಚಾರ ಬಂದ್ ಮಾಡಲಾಗಿದೆ, ಸದ್ಯ ಹಳೆಯ ಸೇತುವೆ ಮೂಲಕ ಎರಡು ಕಡೆಗಳ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗಿದೆ.
Kshetra Samachara
26/09/2020 05:47 pm