ಉಡುಪಿ : ಬಹು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಉಡುಪಿ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೆ ಏರಿಸಬೇಕೆಂಬ ಕೂಗು ಈಗ ಬಲವಾಗಿದ್ದು, ಯುವಶಕ್ತಿ ಕರ್ನಾಟಕ ಸಂಘಟನೆ ಮಾತನಾಡು ಉಡುಪಿ ಅಭಿಯಾನ ಹಮ್ಮಿಕೊಂಡಿದೆ.
ಈ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಈ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ನೀಡಿರುವ ಸಂಘಟನೆ,ಒಂದು ಬೃಹತ್ ಅಭಿಯಾನ ಕೈಗೊಂಡು ಸರಕಾರದ ಮೇಲೆ ಒತ್ತಡ ಹೇರಲು ಸಜ್ಜಾಗಿದೆ.
ಇದರ ಮೊದಲ ಹೆಜ್ಜೆಯಾಗಿ ಮಾತನಾಡು ಉಡುಪಿ ಅಭಿಯಾನವನ್ನು ಸಂಘಟನೆ ಕೈಗೆತ್ತಿಕೊಂಡಿದೆ.
ಈ ಅಭಿಯಾನದ ಮೂಲಕ ಜಿಲ್ಲೆಯ ಗಣ್ಯ ವ್ಯಕ್ತಿಗಳು,ಸಮಾಜಸೇವಕರು ಮತ್ತು ಪ್ರಜ್ಞಾವಂತ ನಾಗರೀಕರ ಅಭಿಪ್ರಾಯ ಸಂಗ್ರಹಿಸುವ ಕಾರ್ಯ ನಡೆಸುತ್ತಿದೆ.
ಈಗಾಗಲೇ ಹಲವು ಗಣ್ಯರು ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಒತ್ತಾಯಿಸಿದ್ದಾರೆ.
ಉಡುಪಿ ಜಿಲ್ಲಾ ಆಸ್ಪತ್ರೆಗೆ ನೂತನ ಕಟ್ಟಡ ಹಾಗೂ ಆಧುನಿಕ ವೈದ್ಯೋಪಕರಣದೊಂದಿಗೆ ಶೀಘ್ರವಾಗಿ ಮೇಲ್ದರ್ಜೆಗೆರಿಸಬೇಕೆಂದು ಆಗ್ರಹಿಸಿ ಅಕ್ಟೋಬರ್ 2 ರಂದು ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಉಪವಾಸ ಸತ್ಯಾಗ್ರಹವನ್ನು ಜಿಲ್ಲೆಯ ಜನತೆ ಮತ್ತು ಹತ್ತು ಹಲವು ಸಂಘಸಂಸ್ಥೆಗಳ ಸಹಕಾರದೊಂದಿಗೆ ಯುವಶಕ್ತಿ ಕರ್ನಾಟಕ ಸಂಘಟನೆ ಹಮ್ಮಿಕೊಂಡಿದೆ ಎಂದು ಸಂಘಟನೆಯ ಸ್ಥಾಪಕಾಧ್ಯಕ್ಷ ಶೀಶ್ ಮಹಮ್ಮದ್ ,ರಾಜ್ಯಾಧ್ಯಕ್ಷ ಪ್ರಮೋದ್ ಉಚ್ಚಿಲ್ ತಿಳಿಸಿದ್ದಾರೆ.
Kshetra Samachara
25/09/2020 11:54 am