ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಉತ್ತರ ಪ್ರದೇಶದ ಹತ್ರಾಸ್ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ; ಕಾಂಗ್ರೆಸ್

ಉಡುಪಿ: ಉತ್ತರಪ್ರದೇಶದ ಹತ್ರಾಸ್ ನಲ್ಲಿ ನಡೆದ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತು.

ಈ ಸಂದರ್ಭ ರ್ಯಾಲಿ ನಡೆಸಿದ ಕಾಂಗ್ರೆಸ್, ಕಾಮುಕರಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ಇಂತಹ ಘಟನೆ ಮರುಕಳಿಸದಂತೆ ತಡೆಯಬೇಕು. ಉತ್ತರ ಪ್ರದೇಶ ಪೊಲೀಸರು ಈ ಪ್ರಕರಣದಲ್ಲಿ ಸಂಶಯಾಸ್ಪದವಾಗಿ ನಡೆದುಕೊಂಡಿದ್ದಾಗಿ ಆರೋಪಿಸಿದ ಮುಖಂಡರು, ಯೋಗಿ ಆದಿತ್ಯನಾಥ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಕೇಂದ್ರ , ರಾಜ್ಯ ಸರಕಾರಗಳು ರೈತ ವಿರೋಧಿ ನೀತಿ ಅನುಸರಿಸುತ್ತಿದ್ದು, ವಿವಾದಾತ್ಮಕ ಕೃಷಿ ಮಸೂದೆ ಹಿಂಪಡೆಯದಿದ್ದಲ್ಲಿ ದೇಶಾದ್ಯಂತ ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿತು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮತ್ತಿತರರು ಪಾಲ್ಗೊಂಡಿದ್ದರು.

Edited By : Nagesh Gaonkar
Kshetra Samachara

Kshetra Samachara

03/10/2020 02:12 pm

Cinque Terre

11.98 K

Cinque Terre

0

ಸಂಬಂಧಿತ ಸುದ್ದಿ