ಉಡುಪಿ: ಯುವಶಕ್ತಿ ಕರ್ನಾಟಕ ವತಿಯಿಂದ ಅಜ್ಜರಕಾಡು ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವಂತೆ ಸರಕಾರವನ್ನು ಒತ್ತಾಯಿಸಿ ಉಪವಾಸ ಸತ್ಯಾಗ್ರಹ ಆರಂಭಗೊಂಡಿದೆ.
ಬೆಳಿಗ್ಗೆ ಏಳು ಗಂಟೆಯಿಂದ ಸಂಜೆ ಏಳರ ತನಕ ಈ ಉಪವಾಸ ಸತ್ಯಾಗ್ರಹ ನಡೆಯಲಿದೆ.
ಮುಂದಿನ ದಿನಗಳಲ್ಲಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ನಿರ್ಲಕ್ಷ್ಯ ವಹಿಸಿದ್ದಲ್ಲಿ ಉಗ್ರ ಹೋರಾಟದ ಹಾದಿ ಹಿಡಿಯಬೇಕಾಗುವುದು ಎಂದು ಯುವ ಶಕ್ತಿ ಕರ್ನಾಟಕ ಮುಖಂಡ ಪ್ರಮೋದ್ ಉಚ್ಚಿಲ್ ಎಚ್ಚರಿಕೆ ನೀಡಿದ್ದಾರೆ.
ಮುಖ್ಯವಾಗಿ ಜಿಲ್ಲಾಸ್ಪತ್ರೆ ಕೇವಲ ಬೋರ್ಡ್ ಗೆ ಮಾತ್ರ ಸೀಮಿತ ವಾಗಿದ್ದು,ಜಿಲ್ಲಾ ಕೇಂದ್ರದಲ್ಲಿರುವ ಆಸ್ಪತ್ರೆ ಇನ್ನೂ ಮೇಲ್ದರ್ಜೆಗೆ ಏರಿಲ್ಲ. ಜನಪ್ರತಿನಿಧಿಗಳು ಇತರ ಸರಕಾರಿ ಕಟ್ಟಡ ಮತ್ತು ಸೌಲಭ್ಯಗಳಿಗೆ ಸಾಕಷ್ಟು ದುಡ್ಡು ಖರ್ಚು ಮಾಡುತ್ತಾರೆ. ಆದರೆ, ಜನರಿಗೆ ಅಗತ್ಯವಾಗಿ ಬೇಕಾಗುವ ಆಸ್ಪತ್ರೆಗೆ ಸೂಕ್ತ ಸೌಲಭ್ಯ ಕಲ್ಪಿಸುವುದಿಲ್ಲ.
ಇದು ಹೋರಾಟದ ಆರಂಭ ಮಾತ್ರ. ಒಂದು ವೇಳೆ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೆ ಏರಿಸದಿದ್ದಲ್ಲಿ ಚುನಾವಣೆ ಬಹಿಷ್ಕಾರ ಮಾಡಲೂ ಹಿಂಜರಿಯುವುದಿಲ್ಲ ಎಂದು ಮನೋವೈದ್ಯ ಡಾ.ಪಿ.ವಿ.ಭಂಡಾರಿ ಹೇಳಿದರು.
ಯುವಶಕ್ತಿ ಕರ್ನಾಟಕ ರಾಜ್ಯಾಧ್ಯಕ್ಷ ಪ್ರಮೋದ್ ಉಚ್ಚಿಲ್ ಮತ್ತಿತರರು ಉಪಸ್ಥಿತರಿದ್ದರು
Kshetra Samachara
02/10/2020 12:09 pm