ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: "ಕೋಟ-ಸಾಬ್ರಕಟ್ಟೆ ಜಿಲ್ಲಾ ಮುಖ್ಯ ರಸ್ತೆಗೆ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟರ ಹೆಸರಿಡಿ"

ಕೋಟ: ದಿ.ವಡ್ಡರ್ಸೆ ರಘುರಾಮ ಶೆಟ್ಟಿಯವರು ಈ ನಾಡು ಕಂಡ ಹೆಮ್ಮೆಯ ಸಮಾಜವಾದಿ ನಿಲುವಿನ ಪತ್ರಕರ್ತರಾಗಿದ್ದು, ಅವರನ್ನು ಇಡೀ ರಾಜ್ಯವೇ ಗೌರವಿಸುತ್ತದೆ. ಹೀಗಾಗಿ ಹುಟ್ಟೂರಿನಲ್ಲಿ ವಡ್ಡರ್ಸೆಯವರ ನೆನಪು ಶಾಶ್ವತವಾಗಿ ಉಳಿಯುವ ನಿಟ್ಟಿನಲ್ಲಿ ಕೋಟ- ಸಾಬ್ರಕಟ್ಟೆ ಜಿಲ್ಲಾ ಮುಖ್ಯ ರಸ್ತೆಗೆ ಅವರ ಹೆಸರಿಡಬೇಕು ಎಂಬ ಬೇಡಿಕೆಯನ್ನು ಬ್ರಹ್ಮಾವರ ಪತ್ರಕರ್ತರ ಸಂಘದವರು ಮುಂದಿರಿಸಿದ್ದು, ಇದು ಸಮಂಜಸವಾಗಿದೆ. ಈ ಕುರಿತು ತಾಪಂ ವತಿಯಿಂದ ನಿರ್ಣಯ ಕೈಗೊಂಡು ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗುವುದು ಎಂದು ಬ್ರಹ್ಮಾವರ ತಾಪಂ ಉಪಾಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದರು.

ಅವರು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಮುಂಗಾರು ಪತ್ರಿಕೆಯ ಸಂಪಾದಕ ದಿ. ವಡ್ಡರ್ಸೆ ರಘುರಾಮ ಶೆಟ್ಟರ ಹೆಸರಿನಲ್ಲಿ ಕೊಡಮಾಡುವ ‘ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಸಂದರ್ಭ ಮಾತನಾಡಿದರು.

ಜಿಪಂ ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ವಡ್ಡರ್ಸೆಯವರ ಹೆಸರಿನಲ್ಲಿ ಒಂದು ಅದ್ಭುತ ಶಕ್ತಿ ಇದೆ. ಆದರೆ, ನಮ್ಮ ಸಮಾಜ ಅವರಿಗೆ ತಕ್ಕ ಗೌರವ ನೀಡಿಲ್ಲ. ಆದರೆ, ಬ್ರಹ್ಮಾವರ ಪತ್ರಕರ್ತರ ಸಂಘ ಅವರ ಹೆಸರಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸುವ ಮೂಲಕ ವಡ್ಡರ್ಸೆಯವರ ಹೆಸರನ್ನು ಚಿರಸ್ಥಾಯಿಯಾಗಿಸಿದೆ ಎಂದರು.

ಕರಾವಳಿ ಮುಂಜಾವು ದಿನಪತ್ರಿಕೆ ಸಂಪಾದಕ ಗಂಗಾಧರ ಹಿರೇಗುತ್ತಿ ಈ ಬಾರಿಯ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಅ.11ರಂದು ಸಂಜೆ 4.30ಕ್ಕೆ ಬ್ರಹ್ಮಾವರ ಬಂಟರ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ತಿಳಿಸಿದರು.

ಕುಂದಾಪುರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ ಮತ್ತಿತರರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

03/10/2020 08:48 pm

Cinque Terre

15.24 K

Cinque Terre

0

ಸಂಬಂಧಿತ ಸುದ್ದಿ