ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಮಂಗಳೂರು: 33/11ಕೆ.ವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆ.ವಿ ಕಾರ್‌ ಸ್ಟ್ರೀಟ್ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಜೂ.22ರ ಬೆಳಗ್ಗೆ 10 ರಿಂದ 5ರವರೆಗೆ ನ್ಯೂಫೀಲ್ಡ್ ಸ್ಟ್ರೀಟ್, ಕಾರ್‌ ಸ್ಟ್ರೀಟ್, ದಯಾನಂದ ಪೈ ಕಾಲೇಜು, ಮಹಾಮಾಯಿ ದೇವಸ್ಥಾನ ರಸ್ತೆ, ಯೂನಿಯನ್ ಬ್ಯಾಂಕ್, ಗೋಪಾಲಕೃಷ್ಣ ದೇವಸ್ಥಾನ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ಬಿಜೈ

ಬಿಜೈ: 110/33/11 ಕೆ.ವಿ. ಬಿಜೈ ಉಪಕೇಂದ್ರದಿಂದ ಹೊರಡುವ 11ಕೆ.ವಿ ಬಿಜೈ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್. ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಜೂ.22ರ ಬೆಳಗ್ಗೆ 10ರಿಂದ 5ರವರೆಗೆ ಬಿಜೈ ಮೈನ್ ರೋಡ್, ಕೆ.ಎಸ್.ಆರ್.ಟಿ.ಸಿ ಪ್ರದೇಶ, ಬಿಜೈ ಚರ್ಚ್ ರಸ್ತೆ, ಬಿಜೈ ನ್ಯೂ ರೋಡ್, ಸಂಕೈಗುಡ್ಡ, ಗ್ಯಾಸ್ ಗೋಡೌನ್, ಎಂ.ಸಿ.ಎಫ್. ಕಾಲೋನಿ, ಆನೆಗುಂಡಿ, ಬಟ್ಟಗುಡ್ಡ, ರಾಮಕೃಷ್ಣ ಭಜನಾ ಮಂದಿರ, ನೋಡುಲೇನ್, ಬಿಜೈ ಮ್ಯೂಸಿಯಂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮೂಡುಬಿದಿರೆ: 110/11 ಕೆ.ವಿ. ಮೂಡುಬಿದಿರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆ.ವಿ. ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್ ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಈ ಕಾರಣದಿಂದ ಜೂ.22ರ ಬೆಳಗ್ಗೆ 10 ರಿಂದ 5ರ ವರೆಗೆ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ, ಕಾಯರ್ ಕಟ್ಟೆ, ಆಜಾದ್ ನಗರ, ಕರಿಯನಂಗಡಿ, ಮಲೆಬೆಟ್ಟು, ಮಂಜನಕಟ್ಟೆ, ಕಾಯಿದೆ, ಕೆಸರಗದ್ದೆ, ಪೆಲಕುಂಜ, ಶಾಂತಿನಗರ, ಮೂಡಾಯಿಕಾಡು, ಇರ್ವತ್ತೂರು ಕ್ರಾಸ್, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ, ದರೆಗುಡ್ಡೆ, ಅರಸುಕಟ್ಟೆ, ಪಣಪಿಲ, ಬಸವನಕಜೆ, ಅಮನೊಟ್ಟು, ಆನೆಗುಡ್ಡೆ, ಜೋಗೊಟ್ಟು, ವಾಲ್ಪಾಡಿ, ಶಿರ್ತಾಡಿ, ಮಕ್ಕಿ, ಶಿಮುಂಜೆ, ಅಳಿಯೂರು, ಬೋರುಗುಡ್ಡೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

Edited By : Nagaraj Tulugeri
Kshetra Samachara

Kshetra Samachara

21/06/2022 10:38 pm

Cinque Terre

7.38 K

Cinque Terre

0

ಸಂಬಂಧಿತ ಸುದ್ದಿ